ಕೌಟುಂಬಿಕ ಕಲಹ : ಪತ್ನಿ ಆತ್ಮಹತ್ಯೆ ಯತ್ನ
ಎಚ್ಡಿಕೋಟೆ,ಆ.31-ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ಅಣ್ಣೂರಿನ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸವಿತಾ(30) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಪ್ಪ ತನ್ನ ಹೆಂಡತಿಯ ಶೀಲ ಶಂಕಿಸಿ ಪ್ರತಿದಿನ ಜಗಳವಾಡುತ್ತಿದ್ದು, ನಿನ್ನೆ ರಾತ್ರಿ ಕುಡಿದು ಬಂದು ಸವಿತಾಳೊಂದಿಗೆ ಜಗಳ ತೆಗೆದಿದ್ದಾನೆ. ಇದರಿಂದ ತೀವ್ರ ಮನನೊಂದ ಸವಿತಾ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಸದ್ಯ ಸವಿತಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಎಚ್ಡಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
► Follow us on – Facebook / Twitter / Google+
Facebook Comments