ಕ್ರಿಮಿನಾಶಕ ಸೇವಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು
ಮದ್ದೂರು, ಸೆ.22- ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ರೈತನೊಬ್ಬ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತುಂಬಿನ ಗ್ರಾಮದಲ್ಲಿ ನಡೆದಿದೆ.ಸಿದ್ದೇಗೌಡ (65) ಆತ್ಮಹತ್ಯೆ ಮಾಡಿಕೊಂಡ ರೈತ. ಸಿದ್ದೇಗೌಡ ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ರೇಷ್ಮೆ, ಕಬ್ಬು ಮತ್ತು ಭತ್ತ ಬೆಳೆ ಬೆಳೆದಿದ್ದರು.ನೀರಿಲ್ಲದೆ ಬೆಳೆಗಳು ಒಣಗಿದ್ದವು. ಇದರಿಂದ ಬೇಸತ್ತ ಸಿದ್ದೇಗೌಡ ಸೆ.10ರಂದು ಜಮೀನಿಗೆ ತೆರಳಿ ಕ್ರಿಮಿನಾಶಕ ಸೇವಿಸಿದ್ದರು.
ವಿಷಯ ತಿಳಿದು ಸಂಬಂಧಿಕರು ಮದ್ದೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ.ಸಿದ್ದೇಗೌಡ ಅವರು ವಿವಿಧ ಬ್ಯಾಂಕ್ಗಳಲ್ಲಿ ಬೆಳೆಗಾಗಿ ಚಿನ್ನ ಗಿರವಿ ಇಟ್ಟು ಸಾಲ ಪಡೆದಿದ್ದರು ಎನ್ನಲಾಗಿದೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.