ಖಾಸಗಿ ಶಿಕ್ಷಣ ಸಂಸ್ಥೆಗಳ ಅಡುಗೆ ಕೋಣೆಗಳಿಗೆ ಸಿಸಿ ಕ್ಯಾಮೆರಾ ಕಡ್ಡಾಯ

CCTV-Camara

ಬೆಂಗಳೂರು, ಮಾ.10- ಖಾಸಗಿ ಶಿಕ್ಷಣ ಸಂಸ್ಥೆ ಹಾಸ್ಟೆಲ್‍ಗಳ ಅಡುಗೆ, ಊಟದ ಕೋಣೆ, ಆಹಾರ ಧಾನ್ಯಗಳ ದಾಸ್ತಾನು ಕೋಣೆಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸುವ ಕಾನೂನು ತರಲು ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಇಂತಹ ಕಠಿಣ ಕಾನೂನು ಅಗತ್ಯವಿದೆ ಎಂದು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷಾರಂಭಕ್ಕೂ ಮುನ್ನವೇ ಈ ಕಾನೂನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಖಾಸಗಿ ಹಾಸ್ಟೆಲ್‍ಗಳು ಆರೋಗ್ಯ ಇಲಾಖೆಯ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲು ಉದ್ದೇಶಿಸಲಾಗಿದೆ ಎಂದರು.  ಖಾಸಗಿ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳ ಸಾವು ಸಂಭವಿಸುವುದನ್ನು ತಡೆಗಟ್ಟಲು ಇಂತಹ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಹಾಸ್ಟೆಲ್‍ಗಳಲ್ಲಿ ಬಳಸುವ ಧಾನ್ಯಗಳು ಮತ್ತು ಆಹಾರದ ಬಗ್ಗೆ ಪರಿಶೀಲಿಸಿ ಪ್ರಮಾಣ ಪತ್ರ ನೀಡಬೇಕಾಗುತ್ತದೆ ಎಂದು ಹೇಳಿದರು.  ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಹಾಸ್ಟೆಲ್‍ಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪ್ರತಿನಿತ್ಯ ಆಹಾರದ ಮಾದರಿ ಆನ್‍ಲೈನ್‍ನಲ್ಲಿ ನೋಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನಮ್ಮ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ 6 ಲಕ್ಷ ವಿದ್ಯಾರ್ಥಿಗಳು ಇದ್ದಾರೆ ಎಂದು ತಿಳಿಸಿದರು.

ಏಪ್ರಿಲ್‍ನಲ್ಲಿ ವರದಿ : 

ರಾಜ್ಯ ಸರ್ಕಾರ ನಡೆಸಿದ ಮಹತ್ವದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷಾ ವರದಿಯನ್ನು ಏಪ್ರಿಲ್‍ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ವರದಿಯ ಸಮೀಕ್ಷೆಯನ್ನು ಈಗಾಗಲೇ ನಡೆಸಲಾಗಿದ್ದು, ಜಾತಿವಾರು ಅಂಕಿ-ಅಂಶಗಳನ್ನೊಳಗೊಂಡ ವರದಿಯನ್ನು ಏಪ್ರಿಲ್‍ನಲ್ಲಿ ಬಹಿರಂಗಗೊಳಿಸಲಾಗುವುದು ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin