ಖೋಟಾನೋಟು ಪ್ರಕರಣ : ಒಬ್ಬನ ಬಂಧನ

kota-notes

ತುಮಕೂರು, ಮೇ.4- ಖೋಟಾನೋಟು ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ಅಪರಾಧ ಪತ್ತೆ ದಳ ಓರ್ವನನ್ನು ಬಂಧಿಸಿ, 35 ಸಾವಿರ ರೂ. ಖೋಟಾನೋಟು ಜಪ್ತಿ ಮಾಡಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ನಡೆದಿದೆ. ಮಾರುತಿ(30) ಬಂಧಿತ ಆರೋಪಿ. ಈತ ತನ್ನ ಮನೆಯಲ್ಲಿ ಜೆರಾಕ್ಸ್ ಮಿಷನ್‍ನಿಂದ 2000 ಮತ್ತು 500 ಮುಖಬೆಲೆಯ ಖೋಟಾನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದನು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಖಚಿತ ಮಾಹಿತಿ ಮೇರೆಗೆ ಡಿಸಿಪಿ ಇನ್ಸ್‍ಪೆಕ್ಟರ್ ಗೌತಮ್ , ಸಬ್‍ಇನ್‍ಸ್ಪೆಕ್ಟರ್ ಪ್ರಾಣೇಶ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದೆ.
ದಾಳಿ ವೇಳೆ ಜೆರಾಕ್ಸ್ ಮಿಷನ್, 2000 ಮತ್ತು 500 ರೂ. ಮುಖಬೆಲೆಯ 35 ಸಾವಿರ ಖೋಟಾನೋಟುಗಳು ಪತ್ತೆಯಾಗಿವೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin