ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ನಾಲ್ವರು ಯುವಕರ ಸಾವು
ರತ್ಲಾಮ್, ಸೆ.16- ಗಣೇಶ ವಿಸರ್ಜನೆ ವೇಳೆ ಇಬ್ಬರು ಸಹೋದರರು ಸೇರಿ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ರತ್ಲಾಮ್ನ ಸಲಾನ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಸಹೋದರರಾದ ಕಮಲೇಶ್ (22), ವಿಶಾಲ್ (20) ಹಾಗೂ ಇನ್ನಿಬ್ಬರು ಯುವಕರಾದ ಅಂಕಿತ್ (21),ಕುನಾಲ್ (22) ಎಂದು ಗುರುತಿಸಲಾಗಿದೆ. ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಇಲ್ಲಿನ ಪಾಲಿಕೆಯ ಮುಖ್ಯ ಅಧಿಕಾರಿ ಜೀವನ್ ರೈ ಮರ್ಥೂ ಆಸ್ಪತ್ರೆಗೆ ದೌಡಾಯಿಸಿದ್ದರು. ಆಗ ಉದ್ರಿಕ್ತರು ಗಣೇಶ ವಿಸರ್ಜನೆ ಸ್ಥಳದಲ್ಲಿ ಸರಿಯಾದ ವ್ಯವಸ್ಥೆ ಮಾಡಿರಲಿಲ್ಲ ಎಂದು ಆರೋಪಿಸಿ ಪಾಲಿಕೆ ಅಧಿಕಾರಿ ಜೀವನ್ ರೈಗೆ ಥಳಿಸಿದ್ದಾರೆ.
ಜೀವನ್ ರೈ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು, ಮೃತ ಯುವಕರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ರೂ. ಪರಿಹಾರವನ್ನು ಜಿಲ್ಲಾಧಿಕಾರಿ ಘೋಷಿಸಿದ್ದಾರೆ. ಘಟನೆಯ ಸಂಪೂರ್ಣ ತನಿಖೆಗೂ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಲ್ಲದೆ, ಜೀವನ್ ರೈ ಅವರನ್ನು ಹುz್ದÉಯಿಂದ ತೆಗೆದು ಹಾಕುವಂತೆ ಸೂಚಿಸಿದ್ದಾರೆ.