ಗನ್ ತೋರಿಸಿ ಅತ್ತಿಗೆ ಮೇಲೆ ಅತ್ಯಾಚಾರ..!
ಮುಜಾಫರ್ನಗರ್, ಏ.24-ಗನ್ ತೋರಿಸಿ ಪ್ರಾಣ ಬೆದರಿಕೆಯೊಡ್ಡಿದ ಮೈದುನನೊಬ್ಬ ತನ್ನ ಅತ್ತಿಗೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮುಜಫರ್ನಗರ್ನಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮಹಿಳೆಯ ಪತಿ ಮತ್ತು ತನ್ನ ಅಣ್ಣ ಹೊರಗೆ ಹೋಗಿದ್ದಾಗ ಕಾಮುಕ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ನೀಡಿದ ದೂರನ್ನು ಆಧರಿಸಿ ಭೋಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ದುಷ್ಕರ್ಮಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.