ಗುಜರಾತ್ ಫಲಿತಾಂಶಕ್ಕೂ ಮುನ್ನ ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಅಧಿಕಾರ ಸ್ವೀಕಾರ

Spread the love

Rahul--01

ನವದೆಹಲಿ, ಡಿ.11-ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಡಿಸೆಂಬರ್ 16ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳ ಫಲಿತಾಂಶ ಹೊರ ಬೀಳುವ (ಡಿಸೆಂಬರ್ 18) ಎರಡು ದಿನ ಮೊದಲು ಅವರು ಅಧಿಕಾರಕ್ಕೇರಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಪುತ್ರ ರಾಹುಲ್ ಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಡಿಸೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ.

ತಾಯಿಯ ಕೈಯಿಂದ ಅಧಿಕಾರ ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನೆಹರೂ-ಗಾಂಧಿ ಕುಟುಂಬದ ಆರನೇ ವ್ಯಕ್ತಿಯಾಗಿ ರಾಹುಲ್ ಗಾಂಧಿ ಗುರುತಿಸಿಕೊಳ್ಳಲಿದ್ದಾರೆ.ಈ ಹಿಂದೆ ಮೋತಿಲಾಲ್ ನೆಹರೂ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ನಂತರ ಜವಹಾರ್ ಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ದೀರ್ಘ ಅವಧಿಗೆ ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಇದೀಗ ರಾಹುಲï ಗಾಂಧಿಯ ಸರದಿ.

Sri Raghav

Admin