ಗೃಹ ಸಚಿವ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ

Dr-Parameshwar

ಬೆಂಗಳೂರು, ಜೂ.1- ಕೆಪಿಸಿಸಿ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ಪುನರಾಯ್ಕೆಗೊಂಡಿರುವ ಡಾ.ಜಿ.ಪರಮೇಶ್ವರ್ ಅವರು ಇಂದು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ನಂತರ ಪರಮೇಶ್ವರ್ ಅವರು ಆರ್.ಟಿ.ನಗರದಲ್ಲಿರುವ ಗಣಪತಿ ದೇವಸ್ಥಾನಕ್ಕೆ ಪತ್ನಿ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅಧ್ಯಕ್ಷರಾಗಿ ಆಯ್ಕೆ ಆದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ರಾಜೀನಾಮೆ ನೀಡುವುದಾಗಿ ಸುದ್ದಿಘೋಷ್ಠಿಯಲ್ಲಿಂದು ತಿಳಿಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿದ್ದು, ಅವರು ರಾಜಧಾನಿಗೆ ಆಗಮಿಸಿದ ನಂತರ ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ನೀಡುವುದಾಗಿ ತಿಳಿಸಿದರು. ಈ ಮಧ್ಯೆ ಸದಾಶಿವನಗರದಲ್ಲಿರುವ ಪರಮೇಶ್ವರ್ ಅವರ ನಿವಾಸಕ್ಕೆ ಮಾಜಿ ಸಚಿವ ಪರಮೇಶ್ವರ್‍ನಾಯಕ್, ಉಪಸಭಾಧ್ಯಕ್ಷ ಶಿವಶಂಕರರೆಡ್ಡಿ ಮತ್ತಿತರರು ಭೇಟಿ ನೀಡಿ ಶುಭ ಕೋರಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin