ಗೋವಾ, ಪಂಜಾಬ್ನಲ್ಲಿ ಇಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆ : ಕೇಜ್ರಿವಾಲ್
ನವದೆಹಲಿ/ಗೋವಾ, ಫೆ.4-ಗೋವಾ ಮತ್ತು ಪಂಜಾಬ್ ರಾಜ್ಯಗಳಲ್ಲಿ ಇಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆ ಎಂದು ಬಣ್ಣಿಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್, ತಮ್ಮ ಪಕ್ಷಕ್ಕೆ ಈ ರಾಜ್ಯಗಳಲ್ಲಿ ಉಜ್ವಲ ಭವಿಷ್ಯ ಇರುವುದಾಗಿ ತಿಳಿಸಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ಮೊದಲ ಚರಣವಾಗಿ ಇಂದು ಈ ಎರಡೂ ರಾಜ್ಯಗಳಲ್ಲಿ ಮತದಾನದ ಅಂಗವಾಗಿ ಟ್ವೀಟ್ ಮಾಡಿದ ಅವರು, ಪ್ರಾಮಾಣಿಕ ರಾಜಕೀಯಕ್ಕೆ ಜನರು ಮತ ಹಾಕಬೇಕೆಂದು ಹೇಳಿದರು.
ಪಣಜಿ ವರದಿ :
ಚುನಾವಣೆ ಫಲಿತಾಂಶದ ನಂತರ ಗೋವಾ ರಾಜ್ಯದ ರಾಜಕಾರಣಕ್ಕೆ ತಾವು ಹಿಂದಿಗುವ ಇಂಗಿತವನ್ನು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ವ್ಯಕ್ತಪಡಿಸಿದ್ದಾರೆ. ಪಣಜಿಯಲ್ಲಿ ಮತಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜನತೆ ಬಯಸಿದರೆ ಮತ್ತೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಸಿದ್ದ ಎಂಬುದನ್ನು ಪರೋಕ್ಷವಾಗಿ ಹೇಳಿದರು.
ಗೋವಾದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಆಯುಷ್ ಸಚಿವ ಶ್ರೀಪಾದ ಯಸ್ಸೋ ನಾಯಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಣಜಿಯಲ್ಲಿ ಇಂದು ಬೆಳಗ್ಗೆ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40 ಸ್ಥಾನಗಳಲ್ಲಿ ಬಿಜೆಪಿ 26ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS