ಗೋಹತ್ಯೆ ಮಾಡಿದರೆ ಜೀವಾವಧಿ ಶಿಕ್ಷೆ..!

Gohatye

ಅಹಮದಾಬಾದ್, ಮಾ.31-ಗೋ ಹತ್ಯೆ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಮಸೂದೆಗೆ ಗುಜರಾತ್ ವಿಧಾನಸಭೆ ಅನುಮೋದನೆ ನೀಡಿದೆ. ಉತ್ತರಪ್ರದೇಶದಲ್ಲಿ ಗೋ ಹತ್ಯೆ ಮತ್ತು ಕಸಾಯಿ ಖಾನೆ ವಿರುದ್ಧ ಉಗ್ರ ಕ್ರಮ ಕೈಗೊಳ್ಳುತ್ತಿರುವ ಸಂದರ್ಭದಲ್ಲೇ ಗುಜರಾತ್‍ನಲ್ಲೂ ಇದು ಪರಿಣಾಮಕಾರಿಯಾಗಿ ಜಾರಿಗೆ ಬರಲು ವೇದಿಕೆ ಸಜ್ಜುಗೊಂಡಿದೆ. ಗೋ ಹತ್ಯೆ ಮತ್ತು ಕಸಾಯಿ ಖಾನೆಗಾಗಿ ಗೋವುಗಳ ಕಳ್ಳಸಾಗಣೆ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಮಸೂದೆಯನ್ನು ಗುಜರಾತ್ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin