ಘಟಪ್ರಭಾ ನದಿಗೆ ನೀರು ಹರಿಸಲು ಮನವಿ

11
ಮುಧೋಳ,ಫೆ.18- ಸಕಾಲದಲ್ಲಿ ಮಳೆ ಇಲ್ಲದೇ ನದಿ ನಾಲೆಗಳು ಬತ್ತಿಹೋಗಿದ್ದು ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಲು ಸಣ್ಣ ಕೈಗಾರಿಕಾ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬೀಳಗಿ ಶಾಸಕ ಜೆ.ಟಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪೂರ ಅವರು ವಿನಂತಿಸಿದರು. ಈ ಸಂದರ್ಭದಲ್ಲಿ ಸಚಿವ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗೆ ಶನಿವಾರದಿಂದ ಕೂಡಲೇ ನೀರು ಹರಿಸಿ ಜನ ಜಾನವಾರುಗಳಿಗೆ ಕುಡಿಯುವ ನೀರಿನ ತೀವ್ರ ತೊಂದರೆ ಪರಿಹರಿಸಬೇಕೆಂದು ಸೂಚಿಸಿದರು. ಸಾರ್ವಜನಿಕರು ಮತ್ತು ರೈತರು ನೀರನ್ನು ಇತಿಮಿತಿಯಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಈ ವೇಳೆ ತಿಮ್ಮಾಪೂರ ತಿಳಿಸಿದರು. ಈ ಸಂದರ್ಭದಲ್ಲಿ ರನ್ನ ಶುಗರ್ ನಿರ್ದೇಶಕ ರಾಜುಗೌಡ ಪಾಟೀಲ, ಬೀಳಗಿ ಮತ್ತು ಮುಧೋಳ ರೈತರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin