ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಮಾರುತಿ ಓಮ್ನಿ ಕಾರು
ಮೈಸೂರು, ಏ.25-ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ವಿಜಯನಗರದಲ್ಲಿ ನಡೆದಿದೆ. ಬೆಳಗ್ಗೆ 10.15ರ ಸುಮಾರಿಗೆ ವಿಜಯನಗರ 4ನೆ ಹಂತದಲ್ಲಿ ಮಾರುತಿ ಓಮ್ನಿ ಕಾರು ಹೋಗುತ್ತಿತ್ತು. ಕಾರಿನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ ಪರಾರಿಯಾಗಿದ್ದಾನೆ.
ಆತ ಅತ್ತ ಹೋದ ಕೂಡಲೇ ಕಾರು ಹೊತ್ತಿ ಉರಿದಿದೆ. ಹಾಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಕಾರು ಯಾರಿಗೆ ಸೇರಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳೀಯರೇ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ್ದರಿಂದ ಅಗ್ನಿ ಶಾಮಕ ದಳದವರು ಬಂದು ಬೆಂಕಿ ಆರಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >