ಚಿಲ್ಲರಿ ಅಂಗಡಿಗಳಿಗೆ ಮದ್ಯ ಸರಬರಾಜು : ವ್ಯಕ್ತಿ ಬಂಧನ

Spread the love

Arrest

ಮೈಸೂರು,ಅ.26-ಗ್ರಾಮೀಣ ಪ್ರದೇಶದ ಚಿಲ್ಲರೆ ಅಂಗಡಿಗಳಿಗೆ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಇಲವಾಲ ಪೊಲೀಸರು ಬಂಧಿಸಿ ವಿಸ್ಕಿ ಪ್ಯಾಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಡಿ ಮೊಹಲ್ಲಾದ ನಿವಾಸಿ ರಾಜು ಬಂಧಿತ ಆರೋಪಿ. ಈತ ಕುಮಾರ ಬೀಡು ತಾಲ್ಲೂಕಿನ ಶ್ರೀಕಾಂತ ವೈನ್ಸ್‍ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯು ನಿನ್ನೆ ದ್ವಿಚಕ್ರ ವಾಹನದಲ್ಲಿ ಮದ್ಯವನ್ನು ಹಳ್ಳಗಳಲ್ಲಿನ ಚಿಲ್ಲರೆ ಅಂಗಡಿಗಳಿಗೆ ಸರಬರಾಜು ಮಾಡುತ್ತಿರುವ ಸಂದರ್ಭದಲ್ಲಿ ಈತನನ್ನು ಸಬ್‍ಇನ್‍ಸ್ಪೆಕ್ಟರ್ ಗೋಪಾಲಕೃಷ್ಣ ಅವರು ಬಂಧಿಸಿದ್ದಾರೆ. ಬಂಧಿತನಿಂದ 288 ವಿಸ್ಕಿ ಪ್ಯಾಕೇಟ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಬಾರ್ ಮಾಲೀಕನ ವಿರುದ್ಧ ಇಲವಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin