ಚುನಾವಣೆ ಹಿನ್ನೆಲೆಯಲ್ಲಿ 71,574 ಶಸ್ತ್ರಾಸ್ತ್ರ ವಶಕ್ಕೆ, 6 ಮಂದಿಯ ಪರವಾನಗಿ ರದ್ದು

ಸಾಂಧರ್ಭಿಕ ಚಿತ್ರ
ಸಾಂಧರ್ಭಿಕ ಚಿತ್ರ

ಬೆಂಗಳೂರು, ಮೇ 10- ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ 71,574 ಶಸ್ತ್ರಾಸ್ತ್ರ ದಾಸ್ತಾನು ಮಾಡಿಕೊಳ್ಳಲಾಗಿದ್ದು, 52 ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಂಡು 6 ಮಂದಿಯ ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಒಟ್ಟು 39,202 ಮಂದಿಗೆ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ. 49,537 ಪ್ರಕರಣಗಳನ್ನು ಸಿಆರ್‍ಪಿಎಲ್ ಕಾಯ್ದೆಯಡಿ ದಾಖಲಿಸಲಾಗಿದ್ದು, ಅಬಕಾರಿ ಇಲಾಖೆ ಒಂದು ಸಾವಿರಕ್ಕೂ ಹೆಚ್ಚು ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಂಡಿದೆ.

5,21,294ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದ್ದು, 24.13ಕೋಟಿ ಮೌಲ್ಯದ ಮದ್ಯ ಇದಾಗಿದ್ದು, ಪರವಾನಗಿ ಉಲ್ಲಂಘನೆ ಸೇರಿದಂತೆ ಇನ್ನಿತರೆ ಪ್ರಕರಣಗಳಡಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.1015 ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಿಸಿದ್ದು, ಇದುವರೆಗೆ ಫ್ಲೈಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೆಲೆನ್ಸ್ ತಂಡ ಹಾಗೂ ಪೆÇಲೀಸ್ ಪ್ರಾಧಿಕಾರಗಳು ಸೇರಿದಂತೆ 54.86 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.

ಫ್ಲೈಯಿಂಗ್ ಸ್ಕ್ವಾಡ್: 10.85 ಕೋಟಿ ನಗದು ವಶಪಡಿಸಿಕೊಂಡಿದ್ದು, 3.49ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದೆ.
ಸ್ಟಾಟಿಕ್ ಸರ್ವೆಲೆನ್ಸ್ ತಂಡ: 43.59ಕೋಟಿ ನಗದು, 49.05ಕೋಟಿ ಚಿನ್ನ, 15.97ಲಕ್ಷ ಮೌಲ್ಯದ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

Sri Raghav

Admin