ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿ ಫೈನಲ್
ಮೈಸೂರು, ಜು.25- ನಾಡ ಹಬ್ಬ ಮೈಸೂರು ದಸರಾದಲ್ಲಿನ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ಬಾರಿ 15 ಆನೆಗಳ ಪಟ್ಟಿಯನ್ನು ಸಿದ್ದಪಡಿಸಲಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಹನ್ನೆರಡು ಆನೆಗಳು ಪಾಲ್ಗೊಳ್ಳುತ್ತವೆ. ಈ ಬಾರಿ ಹೆಚ್ಚುವರಿಯಾಗಿ ಮೂರು ಆನೆಗಳನ್ನು ಕರೆತರಲಾಗುತ್ತಿದೆ. ಅವುಗಳಲ್ಲಿ ಕೃಷ್ಣ, ದ್ರೋಣ, ಭೀಮ ಮೊದಲ ಬಾರಿಗೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ. ಅಂಬಾರಿಯನ್ನು ಹೊರುವ ಅರ್ಜುನ ಹಾಗೂ ಬಲರಾಮ, ಅಭಿಮನ್ಯು, ಗೋಪಾಲಸ್ವಾಮಿ, ವರಲಕ್ಷ್ಮಿ, ಕೃಷ್ಣ, ದ್ರೋಣ, ಭೀಮ, ಕಾವೇರಿ, ವಿಜಯಾ, ವಿಕ್ರಮ, ಗೋಪಿ, ಹರ್ಷ, ಪ್ರಶಾಂತ, ಗಜೇಂದ್ರ ಕೂಡ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ.
< Eesanje News 24/7 ನ್ಯೂಸ್ ಆ್ಯಪ್ >