ಜಾಧವ್ ಪ್ರಕರಣ : ಅಂತಾರಾಷ್ಟ್ರೀಯ ಕೋರ್ಟ್ನಲ್ಲಿ ಮೇ 15ಕ್ಕೆ ವಿಚಾರಣೆ
ನವದೆಹಲಿ, ಮೇ 11-ಭಾರತೀಯ ನೌಕಾ ಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನದ ಸೇನಾ ನ್ಯಾಯಾಲಯ ವಿಧಿಸಿದ ಗಲ್ಲು ಶಿಕ್ಷೆಗೆ ತಡೆ ನೀಡಿರುವ ಅಂತಾರಾಷ್ಟ್ರೀಯ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 15ಕ್ಕೆ ನಿಗದಿಗೊಳಿಸಿದೆ. ಹೇಗ್ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ಈ ವಿಷಯ ತಿಳಿಸಿದ್ದಾರೆ.
ಬೇಹುಗಾರಿಕೆ ಆರೋಪದ ಮೇಲೆ ಜಾಧವ್ ಅವರನ್ನು ಏಕಪಕ್ಷೀಯವಾಗಿ ವಿಚಾರಣೆ ನಡೆಸಿದ ಪಾಕ್ ಮಿಲಿಟರಿ ಕೋರ್ಟ್ ಅವರಿಗೆ ಮರಣದಂಡನೆ ವಿಧಿಸಿತ್ತು. ಜಾಧವ್ ಅವರನ್ನು ಕಳೆದ ವರ್ಷ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐ ಏಜೆಂಟ್ಗಳು ಇರಾನಿನಿಂದ ಅಪಹರಿಸಿ, ಪಾಕ್ಗೆ ಕರೆದೊಯ್ದಿತ್ತು. ನಂತರ ಅವರ ಮೇಲೆ ಗೂಢಚಾರಿಕೆ ಆರೋಪ ಹೊರೆಸಲಾಗಿತ್ತು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments