ಜಿಲ್ಲೆಯಾದ್ಯಂತ ನಡೆಯುತ್ತಿರುವ ಕಾವೇರಿ ಹೋರಟ 8ನೇ ದಿನಕ್ಕೆ ಕಾಲಿಟ್ಟಿದೆ

Kaveri-0002

ಮಂಡ್ಯ,ಸೆ.12- ಜಿಲ್ಲೆಯಾದ್ಯಂತ ನಡೆಯುತ್ತಿರುವ ಕಾವೇರಿ ಹೋರಟ 8ನೇ ದಿನಕ್ಕೆ ಕಾಲಿಟ್ಟಿದ್ದು, ಕನ್ನಡ ಹಾಗೂ ರೈತರಪರ ಸಂಘಟನೆಗಳ ಪ್ರತಿಭಟನೆಯ ಕಾವು ಇನ್ನಷ್ಟು ಬಿಸಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಕಾವೇರಿ ನೀರು ಬೇಕೇ ಬೇಕು ಎಂದು ಪಟ್ಟು ಹಿಡಿದಿರುವ ಕನ್ನಡಿಗರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಇಂದು ಸುಪ್ರೀಂಕೋರ್ಟ್‍ನಲ್ಲಿ ಕರ್ನಾಟಕದ ಆಕ್ಷೇಪಣಾ ಅರ್ಜಿ ವಿಚಾರಣೆ ನಡೆಯಲಿದ್ದು , ಈ ಬಗ್ಗೆ ಯಾವ ತೀರ್ಮಾನ ಹೊರಬೀಳಲಿದೆ ಎಂಬಂತೆ ಪ್ರತಿಭಟನಾಕಾರರ ಮತ್ತು ರಾಜ್ಯದ ಜನತೆಯಲ್ಲಿ ಕುತೂಹಲ ಉಂಟು ಮಾಡಿದೆ.
ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡರ ನೇತೃತ್ವದಲ್ಲಿ ಕಾರ್ಯಕರ್ತರು ಡಿಸಿ ಕಚೇರಿ ಮುಂಭಾಗ ಕಾವೇರಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಕನ್ನಡಪರ ಸಂಘಟನೆಗಳು ಮತ್ತು ಹಲವು ವಿವಿಧ ಸಂಘಟನೆಗಳು ಸೇರಿ ನಗರದಾದ್ಯಂತ ಧಿಕ್ಕಾರ ಮತ್ತು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆಯಲ್ಲಿ ತಲೀನರಾಗಿರುವುದು ಇಂದು ಸಹ ಕಂಡು ಬಂದಿದೆ. ಮಾಜಿ ಶಾಸಕರ ಒತ್ತಾಯ: ಕಾವೇರಿ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಸಂಘರ್ಷ ಏರ್ಪಟ್ಟಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿರುವ ಕನ್ನಡಿಗರನ್ನು ಗುರಿಯಾಗಿಟ್ಟುಕೊಂಡು ಕೆಲವು ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಕರ್ನಾಟಕ ನೋಂದಾಯಿತ ವಾಹನಗಳು, ಕನ್ನಡಿಗರ ಮಾಲೀಕತ್ವದ ಉದ್ಯಮಗಳು ಮತ್ತು ಇತರ ಸಂಸ್ಥೆಗಳ ಮೇಲೆ ಕೆಲವು ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದಿದ್ದು, ಇದರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಮತ್ತು ತಮಿಳುನಾಡಿನಲ್ಲಿರುವ ಕನ್ನಡಿಗರನ್ನು ರಕ್ಷಿಸುವಂತೆ ಮಾಜಿ ಶಾಸಕ ಹಾಗೂ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೇವೇಗೌಡರಿಂದ ವೈಮಾನಿಕ ಸಮೀಕ್ಷೆ: ಪ್ರತಿಭಟನೆ ಬೆನ್ನಲ್ಲೇ ಕಾವೇರಿ ಕಣಿವೆಯ ವಾಸ್ತವ ಸ್ಥಿತಿ ಅರಿತುಕೊಳ್ಳಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಕೆಆರ್‍ಎಸ್ ಕಬಿನಿ, ಹಾರಂಗಿ ಹೇಮಾವತಿ ಜಲಾಶಯಕ್ಕೆ ದೇವೇಗೌಡರು ಭೇಟಿ ನೀಡಿ ಸಂಗ್ರಹವಾಗಿರುವ ನೀರು ಅಚ್ಚುಕಟ್ಟು ಪ್ರದೇಶಗಳಲ್ಲಿ ಬೆಳೆದಿರುವ ಫಸಲು, ರಾಜ್ಯಕ್ಕೆ ಅವಶ್ಯಕವಾಗಿರುವ ನೀರಿನ ಪ್ರಮಾಣ ಮುಂತಾದ ಮಾಹಿತಿ ಪಡೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿನ್ನೆ ಮಂಡ್ಯಕ್ಕೆ ತೆರಳಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು , ಕಾವೇರಿ ಹೋರಾಟಕ್ಕೆ ಇನ್ನಷ್ಟು ಬಲಬಂದಂತಾಗಿದೆ.

 

 

► Follow us on –  Facebook / Twitter  / Google+

Sri Raghav

Admin