ಜುಲೈ 17 ರಂದು ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ

Spread the love

Election-Commissions

ನವದೆಹಲಿ, ಜೂ.7- ಭಾರತದ ನೂತನ ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಆಯ್ಕೆಗೆ ಜುಲೈ 17 ರಂದು ಚುನಾವಣೆ ನಡೆಯಲಿದೆ. ಇದೇ ಜೂನ್ 14 ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದ್ದು , ಜೂನ್ 28 ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿರುತ್ತದೆ.


ಇಂದು ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ನಸೀಮ್ ಪತ್ರಿಕಾಘೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಚುನಾವಣೆಗೆ ಮತಪತ್ರಗಳನ್ನು ಬಳಸಲಾಗುವುದು, ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಸಭೆಯ ಶಾಸಕರು ಮಾತ್ರ ಮತದಾನದ ಹಕ್ಕು ಪಡೆದಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ತಮ್ಮ ಸದಸ್ಯರಿಗೆ ವಿಪ್ ಹೊರಡಿಸಲು ಅಧಿಕಾರ ವಿರುವುದಿಲ್ಲ, ಗುಪ್ತ ಮತದಾನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.


ನಾಮಪತ್ರ ಸಲ್ಲಿಸಿದ ನಂತರ ಜೂ.30. ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜುಲೈ 1 ರ ವರೆಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶವಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿ 50 ಸದಸ್ಯರ ಹಸ್ತಾಕ್ಷರವಿರುವ ಅನುಮೋದಿತ ಪಾತ್ರವನ್ನು ನಾಮಪತ್ರ ಸಲ್ಲಿಸುವ ವೇಳೆ ಸಲ್ಲಿಸಬೇಕು. ಆಯಾ ರಾಜ್ಯದ ವಿಧಾನ ಮಂಡಲದಲ್ಲಿ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಚುನಾವಣಾ ನಡೆಯಲಿದೆ. ಎಲ್ಲಾ ರಾಜ್ಯಗಳಲ್ಲೂ ವೀಕ್ಷಕರನ್ನು ನೇಮಿಸಲಾಗುವುದು, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣಾ ನಡೆಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ . ಜುಲೈ 20 ರಂದು ಮತ ಎಣಿಕೆ ನಡೆಯಲಿದೆ. ನಂತರ ಆಯ್ಕೆಯನ್ನು ಚುನಾವಣಾ ಆಯೋಗವೇ ಘೋಷಿಸಲಿದೆ.

ಪ್ರಣಬ್ ಮುಖರ್ಜಿಯವರ ಅಧಿಕಾರಾವಧಿ ಜುಲೈ24 ರಂದು ಅಂತಿಮಗೊಳ್ಳಲಿದ್ದು, ರಾಷ್ಟ್ರಪತಿ ಚುನಾವಣೆಗಾಗಿ ಪ್ರಕ್ರಿಯೆಗಳು ಆರಂಭವಾಗಿವೆ. ಮುಂದಿನ ರಾಷ್ಟ್ರಪತಿ ಯಾರಾಗಬೇಕೆಂಬ ಬಗ್ಗೆ  ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆದಿದೆ. ಆಡಳಿತಾರೂಢ ಎನ್ಡಿಎ ಮೈತ್ರಿಕೂಟವು ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ ಒಳಗೊಳಗೆ ತಂತ್ರ ನಡೆಸಿದೆ. ಇದೇ ವೇಳೆ ವಿರೋಧ ಪಕ್ಷಗಳೂ ಕೂಡ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸರ್ವಸಮ್ಮತ ಅಭ್ಯರ್ಥಿ ಹುಡುಕಾಟದ ಕಸರತ್ತು ನಡೆಸಿದೆ.  ಬಿಜೆಪಿಯಿಂದ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಹೆಸರು ಕೂಡ ಕೇಳಿಬರುತ್ತಿದೆ. ಕಾಂಗ್ರೆಸ್ ವಲಯದಿಂದ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರ ಹೆಸರು  ಚಾಲ್ತಿಯಲ್ಲಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin