ಜೆಡಿಎಸ್ ಪರ ಪ್ರಚಾರಕ್ಕಿಳಿಯುವರೇ ಸುದೀಪ್..? ಹೆಚ್ಡಿಕೆ ಮನೆಗೆ ಕಿಚ್ಚ ಭೇಟಿ, 2 ಗಂಟೆ ಚರ್ಚೆ

Spread the love

Kichcha--03

ಬೆಂಗಳೂರು, ಏ.2-ಖ್ಯಾತ ಚಲನಚಿತ್ರ ನಟ ಸುದೀಪ್ ಅವರು ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ 2 ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇಂದು ಬೆಳಗ್ಗೆ ಕುಮಾರಸ್ವಾಮಿ ಅವರ ಮನೆಗೆ ತೆರಳಿದ ಸುದೀಪ್,
ಅವರೊಂದಿಗೆ ಉಪಹಾರ ಸೇವಿಸಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ ಬಾರಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‍ನ ತಾರಾ ಪ್ರಚಾರಕರಾಗಿ ಸುದೀಪ್ ಪ್ರಚಾರ ನಡೆಸಲಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

Kichcha--02

ಮತ್ತೆ ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬರಬೇಕು, ಮುಖ್ಯಮಂತ್ರಿಯಾಗಬೇಕು ಎಂದು ಸುದೀಪ್ ಆಶಿಸಿದ್ದು, ಅವರ ಪ್ರಚಲಿತ ರಾಜಕೀಯ ವಿದ್ಯಮಾನಗಳು, ಚುನಾವಣೆ, ಪಕ್ಷಾಂತರ ಪರ್ವ ಸೇರಿದಂತೆ ಇನ್ನಿತರ ವಿಷಯಗಳ ಚರ್ಚೆ ನಡೆಸಿದ್ದಾರೆ. ಈ ವೇಳೆ ಶಾಸಕ ಸಾ.ರಾ.ಮಹೇಶ್, ಅನಿತಾ ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Facebook Comments

Sri Raghav

Admin