ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ – ಯಡಿಯೂರಪ್ಪ ಭೇಟಿ

Spread the love

BalaKrishna-Yadiyurappa

ಬೆಂಗಳೂರು, ಏ.19- ಜೆಡಿಎಸ್‍ನ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿದ ಬಾಲಕೃಷ್ಣ, ಯಡಿಯೂರಪ್ಪ ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿರುವುದು ರಾಜಕೀಯವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.



ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ ಅವರು, ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದಾಗಿ ಸ್ಪಷ್ಟಪಡಿಸಿದರು. ಯಾವುದೇ ರಾಜಕೀಯ ವಿಚಾರದ ಚರ್ಚೆಗಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಲಿಲ್ಲ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin