ಬಾತ್ ರೂಮ್ ಗೂ ಬುಲೆಟ್ ಪ್ರೂಫ್ ಗ್ಲಾಸ್ ಹಾಕಿಸಿದ ತೆಲಂಗಾಣ ಸಿಎಂ ಕೆಸಿಆರ್
ಹೈದರಾಬಾದ್,ನ.23-ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಇತ್ತೀಚೆಗೆ ಬುಲೆಟ್ ಪ್ರೂಫ್ ಬಸ್ ಖರೀದಿ ಮಾಡಿ ವಿವಾದಕ್ಕೆ ಸಿಲುಕಿದ ಬೆನ್ನಲ್ಲೇ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತಮ್ಮ ಬಂಗ್ಲೆಯಲ್ಲಿರುವ ಬಾತ್ ರೂಮ್ ಗೂ ಬುಲೆಟ್ ಪ್ರೂಫ್ ಗ್ಲಾಸ್ ಹಾಕಿಸುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.
ಕೆಸಿಆರ್ ಅವರು ತಮ್ಮ ದುಬಾರಿ ಬದುಕಿಗೆ ಸಿಕ್ಕಾಪಟ್ಟೆ ಹಣ ವ್ಯಯಿಸುತ್ತಿದ್ದು, ಈಗಾಗಲೇ 9 ಎಕರೆ ಭವ್ಯ ಬಂಗಲೆಯನ್ನು ಕಟ್ಟಿಕೊಂಡಿದ್ದಾರೆ. ಈ ಭವ್ಯ ಬಂಗಲೆಯ ಗೃಹಪ್ರವೇಶ ನಾಳೆ ನಡೆಯಲಿದ್ದು, ಸಾಮಾಜಿಕ ಜಾಲ ತಾಣದಲ್ಲಿ ವ್ಯಾಪಕ ಟೀಕೆ ಮತ್ತು ಚರ್ಚೆಗೆ ಒಳಗಾಗಿದ್ದಾರೆ.
ರಾಜ್ಯದಲ್ಲಿ ನಾನಾ ಸಮಸ್ಯೆಗಳು ತಾಂಡವವಾಡುತ್ತಿವೆ. ಸಮಸ್ಯೆ ಬಗೆಹರಿಸಲು ವಿಫಲರಾಗಿರುವ ಕೆಸಿಆರ್ ತೆಲಂಗಾಣವನ್ನು ಅಭಿವೃದ್ಧಿಪಡಿಸುತ್ತೇನೆ ಎಂದು ಹೇಳಿಕೊಂಡು ಅಧಿಕಾರಕ್ಕೇರಿ ಮೋಜುಮಸ್ತಿ ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿಬರುತ್ತಿವೆ.
Facebook Comments