Saturday, November 23, 2024
Homeರಾಜಕೀಯ | Politicsಟಿಕೆಟ್‌ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು : ಬಿಎಸ್ವೈ

ಟಿಕೆಟ್‌ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು : ಬಿಎಸ್ವೈ

ಬೆಂಗಳೂರು,ಜೂ.22- ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ನಾವು ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍.ಯಡಿಯೂರಪ್ಪ ಹೇಳಿದರು.

ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್‌‍ ಸಂಸದರ ಸನಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ.ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್‌‍ ದಯನೀಯ ಸೋಲು ಅನುಭವಿಸಿದೆ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು ಈಗಿನಿಂದಲೇ ಪ್ರಯತ್ನ ಆರಂಭಿಸಬೇಕು. ಕಾರ್ಯಕರ್ತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಯಿತು. ಟಿಕೆಟ್‌ ಕೊಡುವುದರಲ್ಲಿ ಆದ ವ್ಯತ್ಯಾಸದಿಂದ ಇನ್ನೂ 3-4 ಸೀಟು ನಾವು ಕಳೆದುಕೊಂಡೆವು ಎಂದು ಪುನರುಚ್ಚರಿಸಿದರು.

ಕಾಂಗ್ರೆಸ್‌‍ ವಿರುದ್ಧದ ಆಕ್ರೋಶವನ್ನು ಜನ ಚುನಾವಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಆಮಿಷ, ಹಣಬಲದ ಹೊರತಾಗಿಯೂ ಎನ್‌ಡಿಎಯ 19 ಸೀಟು ಜನ ಗೆಲ್ಲಿಸಿದ್ದಾರೆ. ಸಂಸದರು ಅವರವರ ಕ್ಷೇತ್ರಗಳಲ್ಲಿ ಮೋದಿಯ ಜನ ಸೇವಕರಾಗಿ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು. ಕಾಂಗ್ರೆಸ್‌‍ ಅಂದರೆ ಅಭಿವೃದ್ಧಿ ಶೂನ್ಯ ಎಂಬುದನ್ನು ಮನವರಿಕೆ ಮಾಡಬೇಕಾಗಿದೆ. ಜಿಪಂ, ತಾಪಂ, ಗ್ರಾಪಂ ಚುನಾವಣೆಗಳನ್ನು ಬಿಜೆಪಿ-ಜೆಡಿಎಸ್‌‍ ಒಟ್ಟಾಗಿ ಹೋಗಬೇಕಿದೆ ಎಂದು ಅವರು ಹೇಳಿದರು.

RELATED ARTICLES

Latest News