ಟ್ರಂಪ್‍ಗೆ ಸುಗಮವಾಗಿ ಅಧಿಕಾರ ಹಸ್ತಾಂತರಗೊಳ್ಳಲಿದೆ ಹಸ್ತಾಂತರ : ಒಬಾಮ

Obama-Trump

ನ್ಯೂಯಾರ್ಕ್,ನ.10– ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಸುಗಮವಾಗಿ ಅವರಿಗೆ ಅಧಿಕಾರ ಹಸ್ತಾಂತರಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ.  ನ್ಯೂಯಾರ್ಕ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೊಂದು ವಿಷಯಗಳಲ್ಲಿ ಟ್ರಂಪ್ ಜೊತೆ ಡೆಮಾಕ್ರಟಿಕ್ ಪಕ್ಷಕ್ಕೆ ತೀವ್ರ ಭಿನ್ನಮತವಿದೆ. ಆದರೆ ಜನಾದೇಶವನ್ನು ಗೌರವಿಸುತ್ತೇವೆ. ಡೊನಾಲ್ಡ್ ಟ್ರಂಪ್‍ಗೆ ಯಾವುದೇ ರೀತಿ ಅಡಚಣೆಯಾಗದಂತೆ ಸುಗಮವಾಗಿ ಅಧಿಕಾರವನ್ನು ಹಸ್ತಾಂತರಿಸುವುದಾಗಿ ತಿಳಿಸಿದರು.

ಮತದಾರರಿಗೆ ಹಿಲರಿ ಧನ್ಯವಾದ: ಚುನಾವಣೆ ಸ್ಪರ್ಧಿಸಿದ್ದಕ್ಕೆ ನನಗೆ ಹೆಮ್ಮೆಯಿದೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ಡೆಮೊಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಹೇಳಿದ್ದಾರೆ.  ನ್ಯೂಯಾರ್ಕ್‍ನಲ್ಲಿ ಮತದಾರರನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಪ್ರಚಾರದ ವೇಳೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು , ಇದಕ್ಕಾಗಿ ಅಮೆರಿಕನ್ನರನ್ನು ಅಭಿನಂದಿಸುವುದಾಗಿ ಹೇಳಿದರು. ಚುನಾವಣೆಯಲ್ಲಿ ಸೋತಿದ್ದಕ್ಕೆ ತಮ್ಮ ಮತದಾರರಿಗೆ ಹಿಲರಿ ಕ್ಷಮೆ ಕೇಳಿದ್ದಾರೆ. ಇದೇ ವೇಳೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಟ್ರಂಪ್ ಅವರನ್ನು ಅಭಿನಂದಿಸಿದ್ದಾರೆ.

► Follow us on –  Facebook / Twitter  / Google+

Sri Raghav

Admin