ಟ್ರಾಫಿಕ್ ಪೊಲೀಸ್ ಮನೆ ಮೇಲೆ ಎಸಿಬಿ ದಾಳಿ
ಕಲಬುರಗಿ, ಫೆ.3-ಅಕ್ರಮ ಆದಾಯ ಗಳಿಕೆ ಹಿನ್ನೆಲೆಯಲ್ಲಿ ಇಲ್ಲಿನ ನಗರದ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆಯ ಪೇದೆ ಕನಕರೆಡ್ಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ನಗದು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.ನಗರದ ಅಗ್ರಿಕಲ್ಚರಲ್ ಕಾಲೋನಿಯಲ್ಲಿರುವ ನಿವಾಸದ ಮೇಲೆ ಎಸಿಬಿ ಎಸ್ಪಿ ಅನಿತಾ ಹದ್ದಣ್ಣನವರ್ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.ಕಲಬುರಗಿ ನಗರದ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಆದ ಕನಕರೆಡ್ಡಿ ಅವರು ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿತ್ತು.ದಾಳಿ ಸಂದರ್ಭದಲ್ಲಿ ಆಸ್ತಿ ಪತ್ರಗಳು ಪತ್ತೆಯಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >