ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಪಿ.ವಿ.ಸಿಂಧು ಶುಭಾರಂಭ

Sinfdhu

ಡೆನ್ಮಾರ್ಕ್,ಅ.20– ರಿಯೋ ಒಲಿಂಪಿಕ್ಸ್‍ನಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ಆಟಗಾರ್ತಿ ಪಿ.ವಿ.ಸಿಂಧು ಇಲ್ಲಿ ನಡೆಯುತ್ತಿರುವ ಡೆನ್ಮಾರ್ಕ್ ಓಪನ್ ಸೂಪರ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಮೊದಲ ಪಂದ್ಯದಲ್ಲಿ ಗೆದ್ದು ಶುಭಾರಂಭ ಮಾಡಿದ್ದಾರೆ. ಚೀನಾ ಆಟಗಾರ್ತಿ ಬಿಂಜಿಗಿಯೋ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಹೈದರಾಬಾದ್ ಆಟಗಾರ್ತಿ 21-14, 21-15 ಸೆಟ್‍ಗಳಿಂದ ಜಯ ದಾಖಲಿಸಿದ್ದಾರೆ.  ಮುಂದಿನ ಸುತ್ತಿನಲ್ಲಿ ಸಿಂಧು ಜಪಾನ್ ಆಟಗಾರ್ತಿ ಸಯಕಿ ಸಾಟೊ ಅವರ ಸವಾಲನ್ನು ಎದುರಿಸಲಿದ್ದಾರೆ. ಕಳೆದ ಬಾರಿ ನಡೆದ ಚಾಂಪಿಯನ್‍ಶಿಪ್‍ನ್ಲಲಿ ಸಿಂಧು ರನ್ನರ್ ಅಪ್‍ಗೆ ತೃಪ್ತಿಪಟ್ಟುಕೊಂಡಿದ್ದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಧು, ರಿಯೋ ಒಲಿಂಪಿಕ್ಸ್‍ನಲ್ಲಿ ಮಾಡಿದ ಸಾಧನೆಯಿಂದ ಎಂಥ ಸವಾಲುಗಳನ್ನು ಮೆಟ್ಟಿ ನಿಲ್ಲುವ ಆತ್ಮವಿಶ್ವಾಸ ಬಂದಿದೆ ಎಂದರು.

► Follow us on –  Facebook / Twitter  / Google+

Sri Raghav

Admin