ಡೈರಿ ಎಫೆಕ್ಟ್ : ಸ್ಟೀಲ್ ಬ್ರಿಡ್ಜ್ ಗೆ ಎಳ್ಳುನೀರು

Steel-Bridge--01

ಬೆಂಗಳೂರು, ಮಾ.2-ಮಹತ್ವಾಕಾಂಕ್ಷೆಯ 1850 ಕೋಟಿ ರೂ.ಗಳ ವೆಚ್ಚದ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಸರ್ಕಾರ ರದ್ದುಗೊಳಿಸಲು ತೀರ್ಮಾನಿಸಿದೆ. ಈ ಬಗ್ಗೆ ನಗರಾಭಿವೃದ್ದಿ ಸಚಿವ ಕೆ.ಜೆ.ಜಾರ್ಜ್ ಅವರು ಯೋಜನೆ ರದ್ದುಗೊಳಿಸಿರುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ ಅವರು, ಅಪವಾದ ಹೊತ್ತುಕೊಂಡು ಉಕ್ಕಿನ ಸೇತುವೆ ನಿರ್ಮಾಣ ಮಾಡುವ ಅಗತ್ಯ ನಮ್ಮ ಸರ್ಕಾರಕ್ಕೆ ಇಲ್ಲ ಎಂದರು.   ಪ್ರತಿದಿನ ಬೆಳಗ್ಗೆ, ಸಾಯಂಕಾಲ ಆರೋಪಗಳನ್ನು ಕೇಳಿ ಕೇಳಿ ಸಾಕಾಗಿದೆ. ಈ ಯೋಜನೆಯಲ್ಲಿ ಕೋಟ್ಯಂತರ ರೂ.ಗಳನ್ನು ತಿಂದಿದ್ದಾರೆ ಅನಗತ್ಯ ಆರೋಪ ಮಾಡಲಾಗುತ್ತಿದೆ. ಒಂದು ರೂಪಾಯಿಯನ್ನೂ ಕೂಡ ಈ ಯೋಜನೆಯಿಂದ ಪಡೆದಿಲ್ಲ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಇದುವರೆಗೆ ಹೈಕಮಾಂಡ್‍ಗೆ ಕಪ್ಪ ಕಾಣಿಕೆ ನೀಡಲಾಗಿದೆ ಎಂದು ಆರೋಪಿಸಿದರು.ಈಗ ಮುಖ್ಯಮಂತ್ರಿ ಕುಟುಂಬದವರಿಗೆ ಕಪ್ಪ ಕಾಣಿಕೆ ನೀಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಯವರಿಗೆ ಕೆಟ್ಟ ಹೆಸರು ತರಲು ಈ ಯೋಜನೆ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ನಿರಂತರ ಆರೋಪದಿಂದ ಬೇಸತ್ತಿದ್ದು, ಈ ಯೋಜನೆಯನ್ನು ರದ್ದುಗೊಳಿಸುವುದೇ ಸೂಕ್ತ ಎಂದು ತೀರ್ಮಾನಕ್ಕೆ ಬರಲಾಗಿದೆ ಎಂದು ಜಾರ್ಜ್ ತಿಳಿಸಿದ್ದಾರೆ. ಇಂದು ಶಾಸಕರು, ಸಚಿವರು, ಮೇಯರ್ ಅವರೊಂದಿಗೆ ನಡೆದ ಸಭೆಯಲ್ಲಿ ಈ ಸ್ಟೀಲ್ ಬ್ರಿಡ್ಜ್ ಸಂಬಂಧ ವಾಗ್ವಾದವೂ ನಡೆದಿದೆ. ನಗರದ ಸಂಚಾರ ದಟ್ಟಣೆ ನಿಯಂತ್ರಿಸಲು ಈ ಯೋಜನೆಯನ್ನು ಅನುಷ್ಠಾನ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ ಅವ್ಯವಹಾರ, ಭ್ರಷ್ಟಾಚಾರ ನಡೆದಿದೆ. ಹಣ ಮುಖ್ಯಮಂತ್ರಿಗಳಿಗೆ ಸಂದಾಯವಾಗಿದೆ ಎಂದು ಬಿಜೆಪಿ ಹುಯಿಲೆಬ್ಬಿಸಿ ಯಡಿಯೂರಪ್ಪ ಗಂಭೀರ ಆರೋಪ ಕೂಡ ಮಾಡಿದ್ದರು.

ಕಳಂಕರಹಿತವಾಗಿರಬೇಕು ಎಂಬ ಹಿನ್ನೆಲೆಯಲ್ಲಿ ಸಂಪೂರ್ಣ ಈ ಯೋಜನೆಯನ್ನೇ ರದ್ದುಗೊಳಿಸುವುದಾಗಿ ಜಾರ್ಜ್ ತಿಳಿಸಿದ್ದಾರೆ. ಅಭಿವೃದ್ಧಿಗೆ ಪ್ರತಿಪಕ್ಷ ಅಡ್ಡಿಸುತ್ತಿದೆ. ಬಿಎಸ್‍ವೈ ಡೈರಿ ಕಪ್ಪ ಆರೋಪ ಮಾಡಿರುವ ಬಗ್ಗೆ ತನಿಖೆಯಾಗಬೇಕು. ಈ ಯೋಜನೆಯಲ್ಲಿ ಒಂದು ರೂಪಾಯಿ ನಾವು ಪಡೆದಿದ್ದರೆ ಒಂದು ನಿಮಿಷವೂ ಈ ಸ್ಥಾನದಲ್ಲಿ ಇರುವುದಿಲ್ಲ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin