ತಂಬಾಕು ಮಾರಾಟ ಮಾಡುವ ಪರವಾನಗಿ ರದ್ದು ಮಾಡಲು ಜಿಲ್ಲಾಧಿಕಾರಿ ಸೂಚನೆ

kolara

ಕೋಲಾರ, ಏ.26 – ಸರ್ಕಾರದ ಆದೇಶವನ್ನು ಲೆಕ್ಕಿಸದೆ ತಂಬಾಕು ಮಾರಾಟ ಮಾಡುವ ಅಂಗಡಿಗಳ ಟ್ರೈಡ್ ಲೈಸನ್ಸ್ ರದ್ದು ಮಾಡಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಗಂಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಮತ್ತು ಕೋಟ್ಪಾ ಕಾಯ್ದೆಯ ಅನುಷ್ಠಾನದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು ಅವರು, ಕೆಲವು ಅಂಗಡಿಗಳವರು ಸರ್ಕಾರದ ಆದೇಶಕ್ಕೆ ಬೆಲೆ ಕೊಡದೆ ತಂಬಾಕು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಅಂಗಡಿಗಳ ಟ್ರೇಡ್‍ಲೈಸನ್ಸನ್ನು ನಗರಸಭೆಯ ಸಹಕಾರದೊಂದಿಗೆ ರದ್ದು ಪಡಿಸಿ. ಈ ಸಂಬಂಧ ಅಂಗಡಿಗಳ ಮೇಲೆ ಕಾರ್ಯಾಚರಣೆ ಮಾಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಂಬಾಕು ನಿಯಂತ್ರಣಾ ಘಟಕದ ನೋಡಲ್ ಅಧಿಕಾರಿ ಡಾ.ವಿಜಯಕುಮಾರಿ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ತಂಬಾಕು ನಿಯಂತ್ರಣಾ ಘಟಕದಿಂದ ನಡೆಸಲಾಗಿದೆ. ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸುಮಾರು 40 ಕಡೆ ನಾಟಕಗಳನ್ನು ಮಾಡಿಸಲಾಗಿದೆ. ಸುಮಾರು 35 ಮಂದಿ ನಾಟಕದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಜಿಲ್ಲೆಯಾಧ್ಯಂತ ಕೋಟ್ಪಾ ಕಾಯ್ದೆಯನ್ನು ಕಟ್ಟು ನಿಟ್ಟಾಗಿ ಅನುಷ್ಠ್ಠಾನಗೊಳಿಸಿ ಪ್ರತಿ ತಿಂಗಳು ವರದಿಯನ್ನು ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ನೀರಿನ ವಿಚಾರ ಚರ್ಚಿಗೆ ಬಂದಾಗ ಜಿಲ್ಲಾಧಿಕಾರಿಗಳು ಅಲ್ಲಿಯೇ ಇದ್ದ ಬಾಟೆಲ್ ಒಂದನ್ನು ಕೈಯಲ್ಲಿಡಿದು, ಇದಕ್ಕೆ ಪರವಾನಗಿ ಸಿಕ್ಕಿದೆಯೇ ಎಂಬ ಕುರಿತು ಐಎಸ್‍ಐ ಮಾರ್ಕ್ ಇದೆಯೇ ಎಂಬುವುದನ್ನು ಗಮನಿಸಿದರು. ಅದೇ ರೀತಿ ಸಭೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟಟ ಕಾಯ್ದೆಯ ಬಗ್ಗೆ ಚರ್ಚಿಸಲಾಯಿತು. ಸಂಬಂಧ ಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಜಗದೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಸನ್ನ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin