ತಾ.ಪಂ.ಸಭೆಯಲ್ಲಿ ಅಧಿಕಾರಿಗಳಿಗೆ ತರಾಟೆ

Spread the love

maluru

ಮಾಲೂರು, ಸೆ.16-ತಾಪಂ ಸದಸ್ಯರ ಗಮನಕ್ಕೆ ತಾರದೆ ಶಿಥಿಲಾವಸ್ಥೆಯಲ್ಲಿನ ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಅನುಮೋದನೆ ನೀಡಿರುವುದರ ಬಗ್ಗೆ ಅಧಿಕಾರಿಗಳನ್ನು ಸಾಮಾನ್ಯ ಸಭೆಯಲ್ಲಿ ತರಾಟೆಗೆ ತೆಗೆದುಕೊಳ್ಳಲಾಯಿತು.ತಾಪಂ ಅಧ್ಯಕ್ಷೆ ತ್ರಿವರ್ಣರವಿ ಹಾಗೂ ಉಪಾಧ್ಯಕ್ಷೆ ನಾಗವೇಣಿಚಂದ್ರು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸದಸ್ಯರ ಗಮನಕ್ಕೆ ತಾರದೆ ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಅನುಮೋದನೆ ನೀಡಿದ್ದು ಏಕೆ ಎಂದು ಪ್ರಶ್ನಿಸಲಾಯಿತು.ತಾಪಂ ಉಪಾಧ್ಯಕ್ಷೆ ನಾಗವೇಣಿ ಚಂದ್ರು ಮಾತನಾಡಿ, ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಶಾದಿಭಾಗ್ಯದ ಅರ್ಹ ಫಲಾನುಭವಿಗಳಿಗೆ ಯೋಜನೆಯ ಬಗ್ಗೆ ವಿವರಣೆ ಕೇಳಿದರು.ತಾಪಂ ಸದಸ್ಯ ಹೆಚ್.ಎನ್.ಶ್ರೀನಾಥ್, ತಾಪಂ ಸದಸ್ಯರಾದ ವಿ.ನಾಗೇಶ್, ವಿದ್ಯಾಸುಮಂತ್ ಹಾಗೂ ಇಲಾಖಾ ಅಧಿಕಾರಿಗಳು ಹಾಜರಿದ್ದರು.

 

► Follow us on –  Facebook / Twitter  / Google+

 

Facebook Comments

Sri Raghav

Admin