ತುಮಕೂರಲ್ಲಿ ನಟ ಸುದೀಪ್ ಅಭಿಮಾನಿ ಸಾವು
ತುಮಕೂರು, ಮಾ.7- ಅತಿಯಾದ ಸಂತೋಷ ಅತಿರೇಕಕ್ಕೆ ಹೋದಾಗ ಏನಾಗುತ್ತದೆ ಎಂಬುದಕ್ಕೆ ನಗರದ ಗಾಯಿತ್ರಿ ಚಿತ್ರಮಂದಿರದಲ್ಲಿ ನಡೆಯುತ್ತಿರುವ ಹೆಬ್ಬುಲಿ ಚಿತ್ರದ ಪ್ರಚಾರಕ್ಕೆ ಚಿತ್ರದ ನಾಯಕ ನಟ ಸುದೀಪ್ ಆಗಮಿಸಿದ್ದ ವೇಳೆ, ತಮ್ಮ ನೆಚ್ಚಿನ ನಟನನ್ನು ನೋಡಿ, ಆತನನ್ನು ಆಲಂಗಿಸಿ ಖುಷಿ ಪಟ್ಟಿದ್ದ, ಹೊಟೇಲ್ ಉದ್ಯಮಿ ಶಶಿಧರ್(45) ಸಾವನ್ನಪ್ಪಿರುವ ಘಟನೆಯೇ ಸಾಕ್ಷಿ.
ಹೆಬ್ಬುಲಿ ಚಿತ್ರ ವೀಕ್ಷಿಸುತ್ತಿದ್ದ ವೇಳೆ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಎದೆನೋವಿನಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಈ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಇವರು ಹೊಟೇಲ್ ಉದ್ಯಮಿಯಾಗಿದ್ದು, ನಗರದ ಕೆ.ಆರ್.ಬಡಾವಣೆಯಲ್ಲಿ ವಾಸವಾಗಿದ್ದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS