ದಟ್ಟ ಮಂಜಿನಿಂದಾಗಿ ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರ ಸಾವು

Accident--02

ದೇವನಹಳ್ಳಿ, ನ.28-ನಂದಿಬೆಟ್ಟದಲ್ಲಿ ಸೂರ್ಯೋದಯ ವೀಕ್ಷಿಸಲು ಮೂವರು ಸ್ನೇಹಿತರು ಬೈಕ್‍ನಲ್ಲಿ ಹೋಗುತ್ತಿದ್ದಾಗ ದಟ್ಟಮಂಜಿನಿಂದಾಗಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವನಾಥಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಂಧ್ರ ಮೂಲದ ರಾಕೇಶ್(23) ಮೃತಪಟ್ಟ ಬೈಕ್ ಸವಾರ. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸ್ನೇಹಿತರೊಂದಿಗೆ ರಾಕೇಶ್ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟಕ್ಕೆ ಸೂರ್ಯೋದಯ ವೀಕ್ಷಿಸಲು ಇಂದು ಮುಂಜಾನೆ ಹೋಗುತ್ತಿದ್ದರು.

ಏರ್ ಪೋರ್ಟ್  ರಸ್ತೆಯ ಕಾರಹಳ್ಳಿ ಬಳಿ ದಟ್ಟ ಮಂಜಿನಿಂದಾಗಿ ಎದುರಿನಿಂದ ಅತಿವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿ ಇವರ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ವಿಶ್ವನಾಥಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದಿಂದಾಗಿ ಈ ಮಾರ್ಗದ ಸಂಚಾರದಲ್ಲಿ ಕೆಲ ಕಾಲ ಅಸ್ತವ್ಯಸ್ತವಾಗಿತ್ತು. ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Sri Raghav

Admin