ದಸರಾ ನಿಮಿತ್ತ ಮೈಸೂರಿನಾದ್ಯಂತ ಬಿಗಿ ಬಂದೋಬಸ್ತ್

Sysuru
ಮೈಸೂರು,ಸೆ.29-ಮೈಸೂರು ದಸರಾ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 1ರಂದು ಚಾಮುಂಡಿ ಬೆಟ್ಟದಲ್ಲಿ ದಸರಾಗೆ ಅಕೃತ ಚಾಲನೆ ದೊರೆಯಲಿದ್ದು 10ರಂದು ನಡೆಯಲಿರುವ ಜಂಬು ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅ.1ರಿಂದ 16ರವರೆಗೆ ಚಾಮುಂಡಿ ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳ ಪ್ರವೇಶ ನಿಷೇಸಲಾಗಿದೆ ಎಂದರು. ಅಕ್ಟೋಬರ್ 11ರಂದು ಬಿನ್ನಿ ಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ಕಾರ್ಯಕ್ರಮ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಈ ಬಾರಿ ಸಿಡಿಮದ್ದಿನ ಪ್ರದರ್ಶನ ಇರುವುದಿಲ್ಲ ಎಂದು ಹೇಳಿದರು. ನಗರದ ಪ್ರಮುಖ ಸ್ಥಳಗಳಲ್ಲಿ 47 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. 4,814 ಮಂದಿ ಪೊಲೀಸರು , 1400 ಹೋಮ್‌ಗಾರ್ಡ್ಸ್, ಎಂಟು ಕಮಾಂಡೋ ಪಡೆಗಳು, 46 ಸಿಆರ್‌ಪಿ ಮತ್ತು ಕೆಎಸ್‌ಆರ್‌ಪಿ ಪಡೆಗಳು ಮತ್ತು 49 ಭದ್ರತಾ ಪಡಗಳು ಹಾಗೂ ಬಾಂಬ್ ತಪಾಸಣಾ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಮೆಟಲ್ ಡೆಟೆಕ್ಟಿವ್ ಯಂತ್ರಗಳನ್ನು ಅಳವಡಿಸುವುದರೊಂದಿಗೆ ನಗರಾದ್ಯಂತ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ನಗರ ಪೊಲೀಸ್  ಆಯುಕ್ತ ದಯಾನಂದ್ ತಿಳಿಸಿದರು.

► Follow us on –  Facebook / Twitter  / Google+

Sri Raghav

Admin