ದಿಢೀರ್ ಬೆಳವಣಿಗೆಯೊಂದರಲ್ಲಿ ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ..!

Spread the love

Anand-Singh--02

ಬೆಂಗಳೂರು, ಜ.27: ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ, ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿರುವ ಸ್ಪೀಕರ್ ಕೋಳಿವಾಡ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಶಾಸಕ ಆನಂದ್ ಸಿಂಗ್, ‘ನಾನು ಈ ದಿನ, ಕರ್ನಾಟಕ ವಿಧಾನಸಭೆಯ ನನ್ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಒಂದು ಸಾಲಿನ ಪತ್ರವನ್ನು ನೀಡಿದ್ದಾರೆ.

ಈ ಹಿಂದೆ ಪಕ್ಷದ ಮುಖಂಡರ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ಆನಂದ್ ಸಿಂಗ್, ಪಕ್ಷ ಬಿಡುವ ಸೂಚನೆ ನೀಡಿದ್ದರು. ಇದೆ ಕಾರಣಕ್ಕೆ ಜ.6ರಂದು ಹೊಸಪೇಟೆಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿಯೂ ಪಾಲ್ಗೊಂಡಿರಲಿಲ್ಲ. ಈ ಬೆಳವಣಿಗೆಗಳ ಮಧ್ಯೆಯೇ ಆನಂದ್ ಸಿಂಗ್ ಮುಂದಿನ ನಡೆ ಏನೆಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.  ಬಳಿಕ ಈ ಬಗ್ಗೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರು ರಾಜೀನಾಮೆ ಪತ್ರವನ್ನು ಪರಿಶೀಲಿಸಿ, ‘ಶಾಸಕ ಸ್ಥಾನಕ್ಕೆ ಯಾವ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೀರಿ, ಏನಾದರೂ ಒತ್ತಡವಿದೆಯೇ’ ಎಂಬುದನ್ನು ಪರಿಶೀಲಿಸಿದ್ದು, ‘ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ’ ಎಂಬುದನ್ನು ಖಚಿತಪಡಿಸಿಕೊಂಡ ನಂತರ ರಾಜೀನಾಮೆ ಅಂಗೀಕರಿಸಿದ್ದಾರೆ.

Facebook Comments

Sri Raghav

Admin