ದೆಹಲಿ ಮೆಟ್ರೋ ರೈಲಿನಲ್ಲಿ ಬೆಂಕಿ, ಪ್ರಯಾಣಿಕರಲ್ಲಿ ಆತಂಕ

Spread the love

DSelhi-MEtro--01

ನವದೆಹಲಿ, ಮೇ 24-ದೆಹಲಿ ಮೆಟ್ರೋ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರಲ್ಲಿ ಕೆಲ ಕಾಲ ಆತಂಕ ಸೃಷ್ಟಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಗರದ ಮೆಟ್ರೋ ರೈಲು ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣದಿಂದ ರಾಜೀವ್‍ಚೌಕ್ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಬೆಂಕಿ ಕಿಡಿಯೊಂದಿಗೆ ಶಬ್ಧ ಕೇಳಿಬಂದಿದೆ. ನಂತರ ರೈಲಿನ ಬೋಗಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿತು. ತಕ್ಷಣ ರೈಲನ್ನು ನಿಲ್ಲಿಸಿ ಪ್ರಯಾಣಿಕರನ್ನು ಬೇರೊಂದು ರೈಲಿಗೆ ಸ್ಥಳಾಂತರಿಸಲಾಯಿತು. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೆಟ್ರೋ ರೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin