ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶು ಇಟ್ಟು ಪಾಪಿ ತಾಯಿ ಪರಾರಿ
ಧಾರವಾಡ,ಮಾ.28- ನವಜಾತ ಹೆಣ್ಣು ಶಿಶುವನ್ನು ಪಾಪಿ ತಾಯಿಯೊಬ್ಬಳು ನಗರ ಹೊರವಲಯದ ಬಸವೇಶ್ವರ ದೇವಸ್ಥಾನದಲ್ಲಿ ಬಿಟ್ಟು ಹೋದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ, ಕೃಷಿ ವಿವಿ ಬಳಿಯ ಬಸವೇಶ್ವರ ದೇವಸ್ಥಾನದಲ್ಲಿ ಪರಾರಿಮಗು ಇಟ್ಟು ಹೋಗಿರಬಹುದು ಎಂದು ಶಂಕಿಸಲಾಗಿದೆ.ಸ್ಥಳೀಯರು ಶಿಶುವನ್ನು ಗಮನಿಸಿ ಕೂಡಲೇ 108 ಅಂಬ್ಯುಲನ್ಸಗೆ ಮಾಹಿತಿ ನೀಡಿದ್ದಾರೆ. ಸದ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಮಗುವಿನ ಆರೈಕೆ ಮಾಡಲಾಗುತ್ತಿದೆ.ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ದೇವಾಲಯಕ್ಕೆ ಸುದ್ದಿ ತಿಳಿದ ಪೊಲೀಸರು ಆಗಮಿಸಿ ಪರಿಶೀಲನೆ ನಂತರ ಮುಂದಿನ ಕ್ರಮ ಕೈಗೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >