ದೇಶ ಅಭಿರುದ್ದಿಯಾಗಲು ಪ್ರತಿ ಮಗುವಿಗೂ ಶಿಕ್ಷಣ ಕೊಡಿಸಿ

Spread the love

kolegala

ಕೊಳ್ಳೇಗಾಲ, ಆ.29- ಸಮಾಜದ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಕೊಡಿಸುವ ಮೂಲಕ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಹಕರಿಸಿ ಎಂದು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ರಾಚೇಗೌಡ ಪೋಷಕರಿಗೆ ಸಲಹೆ ನೀಡಿದರು.  ಪಟ್ಟಣದಲ್ಲಿ ತಾಲ್ಲೂಕು ಕುರುಬರ ಸಂಘ ಹಾಗೂ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ 2015-16 ನೇ ಸಾಲಿನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಮಕ್ಕಳ ಭವಿಷ್ಯದ ಅಡಿಪಾಯವಾಗಬೇಕು ಎಂದರು.  ಸಂಘದ ಖಂಜಾಚಿ ಸೋಮಶೇಖರ್ ಮಾತನಾಡಿ, ಸಂಘದ ವತಿಯಿಂದ ಪ್ರತಿ ಮಕ್ಕಳನ್ನು ಪ್ರೊ ತ್ಸಾಹಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಲಾಗಿದೆ, ಅದೇ ರೀತಿ ಮುಂದಿನ ವರ್ಷದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು. ಸಮಾರಂಭದಲ್ಲಿ ಕುರುಬ ಸಮಾಜದ ಸುಮಾರು ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ 40 ಕ್ಕೂ ಹೆಚ್ಚು ಮಕ್ಕಳು, ಕ್ರೀಡಾ ವಿಭಾಗದಲ್ಲಿ ರಾಷ್ಟ್ರ ಮಟ್ಟದ ಓಟಗಾತಿ ಹಾಗೂ ಅಂಗವಿಕಲ ವಿದ್ಯಾರ್ಥಿ ಪುರಸ್ಕಾರ ನೀಡಿ ಗೌರವಿಸಲಾಯಿತು.

► Follow us on –  Facebook / Twitter  / Google+

Facebook Comments

Sri Raghav

Admin