ದೌರ್ಜನ್ಯ ನಡೆಸುತ್ತಿದ್ದ ಸಿಬ್ಬಂದಿಗಳನ್ನು ಒತ್ತೆಯಾಳಾಗಿಟ್ಟುಕೊಂಡ ಖೈದಿಗಳು

Hostage--01

ಸ್ಮಿರ್ನಾ(ಅಮೆರಿಕ), ಫೆ. 2-ತಮ್ಮನ್ನು ಸರಿಯಾಗಿ ನೋಡಿಕೊಳೋಳುತ್ತಿಲ್ಲ ಮತ್ತು ಅಧಿಕಾರಿಗಳು ದೌರ್ಜನ್ಯ  ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಕಾರಾಗೃಹ ವಾಸಿಗಳು ಐವರು ಸಿಬ್ಬಂದಿಯನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವ ಘಟನೆ ಸ್ಮಿರ್ನಾದ ದಿಲಾವೇರ್ ಜೈಲಿನಲ್ಲಿ ನಡೆದಿದೆ. ಇದೇ ವೇಳೆ ಅಪರಾಧಿಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು, ವೈದ್ಯರು, ಆ್ಯಂಬುಲೆನ್ಸ್‍ಗಳು ಸ್ಥಳಕ್ಕೆ ಧಾವಿಸಿದ್ದು ಒತ್ತೆಯಾಳುಗಳನ್ನು ಮುಕ್ತಗೊಳಿಸುವ ಪ್ರಯತ್ನ ನಡೆಸಿದ್ದಾರೆ.

ಇಂದು ಬೆಳಗಿನ ಜಾವದ ವೇಳೆಗೆ ಇಬ್ಬರನ್ನು ಕೈದಿಗಳು ಬಿಡುಗಡೆ ಮಾಡಿದ್ದಾರೆ. ಇನ್ನೂ ಮೂವರು ಸಿಬ್ಬಂದಿ ಆವರ ವಶದಲ್ಲೇ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಲಿನಲ್ಲಿ ಯಾವುದೇ ವ್ಯವಸ್ಥೆಯೂ ಉತ್ತಮವಾಗಿಲ್ಲ. ಅಮೆರಿಕದ ಅಧ್ಯಕ್ಷರು ಈ ಯಾವ ವಿಷಯವನ್ನೂ ಗಮನಿಸುತ್ತಿಲ್ಲ ಎಂಬುದು ಖೈದಿಗಳ ಆರೋಪವಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜೈಲುಗಳಿಗೂ ಭಾರೀ ಬಿಗಿ ಭದ್ರತೆ ಒದಗಿಸಲಾಗಿದೆ. ಸಿಬ್ಬಂದಿಯನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin