ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೊಂದು ಸೂಪರ್ ಸುದ್ದಿ..!
ಬೆಂಗಳೂರು,ಫೆ.23- ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 17ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ. ಪರೀಕ್ಷೆ ಆರಂಭವಾದ ದಿನದಿಂದ ಪರೀಕ್ಷೆ ಮುಗಿಯುವವರೆಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇದ್ದ ದಿನ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷೆ ಬರೆಯುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಳಿಗೆ ಕೆಎಸ್ಆರ್ಟಿಸಿ ಭರ್ಜರಿ ಕೊಡುಗೆ ನೀಡಿದ್ದು, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷಾ ಕೇಂದ್ರದಿಂದ ಮನೆಗೆ ಹಿಂದಿರುಗುವಾಗ ವೇಗದೂತ ಬಸ್ ಸೇರಿದಂತೆ ಎಲ್ಲೆಡೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ವಿದ್ಯಾರ್ಥಿಗಳು ಬಸ್ಗಳಲ್ಲಿ ತಮ್ಮ ಪರೀಕ್ಷೆಯ ಹಾಲ್ ಟಿಕೇಟ್ ತೋರಿಸಿ ಈ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಈ ಹಿಂದೆ ಕೆಎಸ್ಆರ್ಟಿಸಿ ಎಸ್ಎಸ್ಎಲ್ಸಿ ಮಕ್ಕಳಿಗೂ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿತ್ತು. ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣದ ಅವಕಾಶ ನೀಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕಿದೆ.
ಕೆಎಸ್ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತಾಗಿ ಪ್ರಯಾಣಿಸಬಹುದಾಗಿದೆ ಎಂದು ಕೆಎಸ್ಆರ್ಟಿಸಿ ಮುಖ್ಯ ವಸ್ಯವಸ್ಥಾಪಕರು ಪ್ರಕಟಣೆ ಹೊರಡಿಸಿದ್ದು, ಹಳ್ಳಿಗಾಡು ಪ್ರದೇಶದಿಂದ ಪಟ್ಟಣಕ್ಕೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ.