ನಂಜನಗೂಡು ಉಪಚುನಾವಣೆ : ಮಾ.20ರಂದು ಶ್ರೀನಿವಾಸ ಪ್ರಸಾದ್‍ ನಾಮಪತ್ರ ಸಲ್ಲಿಕೆ

Srinivas-Prasad-and-Siddara

ಮೈಸೂರು, ಮಾ.16- ನಂಜನಗೂಡು ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀನಿವಾಸ ಪ್ರಸಾದ್ ಅವರು ಮಾ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ಭಾರೀ ಮೆರವಣಿಗೆಯೊಂದಿಗೆ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.  ಅಂದು ಮಧ್ಯಾಹ್ನ 12 ರಿಂದ 1 ಗಂಟೆಯೊಳಗೆ ನಂಜನಗೂಡು ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿ ಜಗದೀಶ್ ಅವರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ತೊಡೆತಟ್ಟಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಚುನಾವಣಾ ಕಣಕ್ಕಿಳಿದಿರುವ ಶ್ರೀನಿವಾಸ ಪ್ರಸಾದ್ ಅವರು ಅಂದು ತಮ್ಮ ಸ್ವಕ್ಷೇತ್ರ ನಂಜನಗೂಡಿನಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin