ನಟ ಸುದೀಪ್ ನನ್ನ ನೋಡಲಾಗದೆ ಆತ್ಮಹತ್ಯೆಗೆ ಯತ್ನಿಸಿದ ಇಬ್ಬರು ವಿದ್ಯಾರ್ಥಿಗಳು

Sudeep-Fans-Hub-li

ಬೆಳಗಾವಿ,ಮಾ.8- ಕಿಚ್ಚ ಸುದೀಪ್ ನೋಡುವ ಆಸೆ ಈಡೇರದೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಬ್ಬುಲಿ ಚಿತ್ರದ ಪ್ರಚಾರಕ್ಕಾಗಿ ಇಲ್ಲಿಗೆ ಸುದೀಪ್ ಆಗಮಿಸುತ್ತಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಭೂತರಾಮನಹಟ್ಟಿಯ ವಿದ್ಯಾರ್ಥಿಗಳು ಕಿಚ್ಚನನ್ನು ಭೇಟಿ ಮಾಡುವ ನಿರೀಕ್ಷೆಯಲ್ಲಿದ್ದರು. ಆದರೆ ಸುದೀಪ್ ಬರದಿದ್ದಕ್ಕಾಗಿ ಮನನೊಂದ ಈ ಇಬ್ಬರು, ಅವರನ್ನು ನೋಡಲೇಬೇಕು ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಚನ್ನಮ್ಮ ವೃತ್ತದಲ್ಲಿ ಪೆಟ್ರೋಲ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸುದ್ದಿ ತಿಳಿದ ಖಡೆಬಜಾರ್ ಠಾಣೆ ಡಿಸಿಪಿ ರಾಧಿಕಾ ಸ್ಥಳಕ್ಕೆ ಭೇಟಿ ನೀಡಿದ್ದು , ಅವರನ್ನು ಮನವೊಲಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ಬುದ್ದಿ ಮಾತು ಹೇಳಿ ಕಳುಹಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin