ನಾಳೆಯಿಂದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ, ನಿಷೇಧಾಜ್ಞೆ ಜಾರಿ
ಬೆಂಗಳೂರು, ಜೂ.14-ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಾಳೆಯಿಂದ (ಜೂ.15) ರಿಂದ ಜೂ.22ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನು ನಡೆಸುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯುವ ಸಲುವಾಗಿ ನಜಗರ ಪೊಲೀಸ್ಆಯುಕ್ತರು ನಾಳೆಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿದ್ದು, ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments