ನಿಮ್ಮ ಅರ್ಜಿಗೆ ಸಮರ್ಥನೆ ಏನು..? : ಸ್ವಾಮಿಗೆ ಸುಪ್ರೀಂ ಪ್ರಶ್ನೆ
ನವದೆಹಲಿ, ಜ.29-ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಪತ್ನಿ ಮತ್ತು ಮಹಿಳಾ ಉದ್ಯಮಿ ಸುನಂದಾ ಪುಷ್ಕರ್ ಅವರ ಸಾವಿನ ಬಗ್ಗೆ ವಿಶೇಷ ತನಿಖಾ ತಂಡದಿಂದ(ಎಸ್ಐಟಿ) ತನಿಖೆ ನಡೆಸಬೇಕೆಂದು ಕೋರಿ ಬಿಜೆಪಿ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯಲ್ಲಿನ ಅಂಶಗಳ ಬಗ್ಗೆ ಸುಪ್ರೀಂಕೋರ್ಟ್ ಇಂದು ಸಮರ್ಥನೆಗಳನ್ನು ಕೇಳಿದೆ.
ನಿಮ್ಮ ಅರ್ಜಿಯಲ್ಲಿನ ಅಂಶಗಳಲ್ಲಿನ ವಾದಗಳ ಬಗ್ಗೆ ನ್ಯಾಯಾಲಯಕ್ಕೆ ತೃಪ್ತಿಪಡಿಸಲು ನಿಮ್ಮ ಬಳಿ ಯಾವ ಸಮರ್ಥನೆ ಇದೆ ಎಂಬ ಬಗ್ಗೆ ತಿಳಿಸುವಂತೆ ಸುಪ್ರೀಂಕೋರ್ಟ್ ಕೇಳಿದೆ. ಎಸ್ಐಟಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದರಿಂದ ಸ್ವಾಮಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಸುನಂದಾ ಪುಷ್ಕರ್ ಜನವರಿ 17, 2014ರಲ್ಲಿ ದೆಹಲಿಯ ಪಂಚತಾರಾ ಹೋಟೆಲ್ನ ಕೊಠಡಿಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದರು.