ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು : ಚಾಲಕ ಸಾವು

accidant

ಹುಳಿಯಾರು, ಆ.23- ಅತಿವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಳಿಯಾರು  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಗುಬ್ಬಿ ಪಟ್ಟಣ ನಿವಾಸಿ ನದೀಂ(28)ಮೃತ ದುರ್ದೈವಿ.ಹೋಬಳಿಯ ದೊಡ್ಡಬಿದರೆ ಹಾಗೂ ಚಿಕ್ಕಬಿದರೆ ಗ್ರಾಮದ ಮಧ್ಯೆ ರಾತ್ರಿ 8 ಗಂಟೆಯಲ್ಲಿ ಈ ಅವಘಡ ಸಂಭವಿಸಿದೆ.
ಹುಳಿಯಾರಿನಿಂದ ಗುಬ್ಬಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಅವಘಡದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಹುಳಿಯಾರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

► Follow us on –  Facebook / Twitter  / Google+

Sri Raghav

Admin