ನಿವೃತ್ತ ನ್ಯಾಯಮೂರ್ತಿ ಕರ್ಣನ್ ಜಾಮೀನು ಅರ್ಜಿ ವಜಾಗೊಳಿಸಿದ ಸ್ರುಪೀಂ

Spread the love

Karnan--01

ನವದೆಹಲಿ,ಜೂ.21-ನ್ಯಾಯಾಂಗ ನಿಂದನೆ ಆರೋಪಕ್ಕೆ ಸಿಲುಕಿ ನಿನ್ನೆಯಷ್ಟೇ ಬಂಧನಕ್ಕೊಳಗಾಗಿದ್ದ ಕೋಲ್ಕತ್ತ ಹೈಕೋರ್ಟ್ ನ್ಯಾಯಮೂರ್ತಿ ಕರ್ಣನ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.   ಇದರಿಂದಾಗಿ ಕರ್ಣನ್ ಸದ್ಯಕ್ಕೆ ಕಾರಾಗೃಹದಲ್ಲೇ ಇರಬೇಕಾದ ಇಕ್ಕಟ್ಟಿಗೆ ಸಿಲುಕಿದ್ದಾರೆ. ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.   ತಮ್ಮ ಬಂಧನವನ್ನು ಪ್ರಶ್ನಿಸಿ ಕರ್ಣನ್ ಇಂದು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಖೆಹರ್ ಸಿಂಗ್ ನೇತೃತ್ವದ ಸಾಂವಿಧಾನಿಕ ಪೀಠ ಅರ್ಜಿಯನ್ನು ವಜಾಗೊಳಿಸಿತು.

ಕೋಲ್ಕತ್ತಾ ಹೈಕೋರ್ಟ್‍ನ ನ್ಯಾಯಮೂರ್ತಿಯಾಗಿದ್ದ ಕರ್ಣನ್ ನ್ಯಾಯಾಲಯಗಳಲ್ಲೂ ಭ್ರಷ್ಟಾಚಾರ ನಡೆಯುತ್ತದೆ ಎಂದು ಆರೋಪಿಸಿದ್ದರು. ಅಲ್ಲದೆ ಇಲ್ಲಿಯೂ ವರ್ಗಾವಣೆ, ಮುಂಬಡ್ತಿ, ಜಾತಿ, ಧರ್ಮದ ಆಧಾರದ ಮೇಲೆ ನಡೆಯುತ್ತಿದೆ ಎಂದು ದೂರಿದ್ದರು.   ಕರ್ಣನ್ ವಿರುದ್ಧ ಸುಪ್ರೀಂಕೋರ್ಟ್‍ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಾರ್ವಜನಿಕರೊಬ್ಬರು ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠ ಪದೇ ಪದೇ ನೋಟಿಸ್ ಜಾರಿ ಮಾಡಿದ್ದರೂ ಕ್ಯಾರೆ ಎಂದಿರಲಿಲ್ಲ.

ಕಳೆದ ಮೇ 9ರಂದು ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಖೆಹರ್ ಸಿಂಗ್ ನೇತೃತ್ವದಲ್ಲಿ ಏಳು ಮಂದಿ ಸಾಂವಿಧಾನಿಕ ಪೀಠ ಕರ್ಣನ್‍ಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ವಿಧಿಸಿತ್ತು.   ಸ್ವತಂತ್ರ ಭಾರತದ ಇತಿಹಾಸದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಒಬ್ಬರಿಗೆ ನ್ಯಾಯಾಂಗ ನಿಂದನೆ ಆರೋಪದಡಿ ಜೈಲು ಶಿಕ್ಷೆ ವಿಧಿಸಿದ ಪ್ರಕರಣ ಇದೇ ಮೊದಲು.

ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿದ್ದಂತೆ ಮೇ 9ರಿಂದ ಕರ್ಣನ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ನಿನ್ನೆಯಷ್ಟೇ ಕೊಯಮತ್ತೂರು ಸಮೀಪದ ಮಲುಚಿಚಂಪಟ್ಟಿಯ ರೆಸಾರ್ಟ್‍ನಲ್ಲಿ ತಂಗಿದ್ದ ಅವರನ್ನು ಬಂಧಿಸಿದ್ದರು.
ಕರ್ಣನ್ ಅವರ ದೂರವಾಣಿಯ ಒಳ ಮತ್ತು ಹೊರ ಹೋಗುವ ಕರೆಗಳನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದರು. ಇದೇ 12ರಂದು ಸೇವೆಯಿಂದ ನಿವೃತ್ತಿಯಾದರೂ ಅವರಿಗೆ ಶಿಷ್ಟಾಚಾರದಂತೆ ಬೀಳ್ಕೊಡುಗೆ ಸಿಕ್ಕಿರಲಿಲ್ಲ.   ನ್ಯಾಯಮೂರ್ತಿ ಕರ್ಣನ್ ತಮ್ಮ ಸೇವಾವಧಿಯಲ್ಲಿ ಈ ರೀತಿ ಅನೇಕ ವಿವಾದಗಳನ್ನು ಸೃಷ್ಟಿಸಿ ಮೈಮೇಲೆದುಕೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin