ನೋಟಿನ ನೋವನ್ನು ಸ್ವಲ್ಪ ದಿನ ಸಹಿಸಿಕೊಳ್ಳಿ : ಮೋದಿ

Spread the love

Modi-02

ಆಗ್ರಾ, ನ., 20: ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗ್ರಾದಲ್ಲಿ ಇಂದು ಗ್ರಾಮೀಣ ಆವಾಸ್ ಯೋಜನೆಯನ್ನು ಉದ್ಘಾಟಿಸಿದರು. ಕೇಂದ್ರ ಸರ್ಕಾರ ಆರಂಭಿಸಿರುವ ವಸತಿ ಯೋಜನೆಯೇ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ 2022ರೊಳಗೆ ವಸತಿ ಕಲ್ಪಿಸಿಕೊಡುವ ಯೋಜನೆ ಇದಾಗಿದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆಂದು 1.5 ಲಕ್ಷ ರೂಪಾಯಿಗಳನ್ನು ಕೇಂದ್ರ ಸರ್ಕಾರ ನೀಡುತ್ತದೆ. 2022ರೊಳಗೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಮನೆಗಳನ್ನು ನಿರ್ಮಿಸಿಕೊಡುವುದಲ್ಲದೆ ಗ್ರಾಮೀಣ ಪ್ರದೇಶದ 1 ಕೋಟಿ ಜನರಿಗೆ ಮುಂದಿನ ಮೂರು ವರ್ಷಗಳಲ್ಲಿ ಮನೆ ನಿರ್ಮಿಸಿ ಕೊಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.
ಸ್ವಲ್ಪ ದಿನ ಸಹಿಸಿಕೊಳ್ಳಿ :

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಬಗ್ಗೆ ಸಂತಾಪ ವ್ಯಕ್ತಪಡಿಸಿದರು. ಈ ದೇಶದ ದಲಿತರು, ರೈತರು, ಬಡವರು ನೋಟು ನಿಷೇಧ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಆ ಬಗ್ಗೆ ನನಗೆ ಹೆಮ್ಮೆ ಇದೆ. ನೋಟು ನಿಷೇಧ ಮಾಡಿದಾಗಲೇ ಸಾರ್ವಜನಿಕರಲ್ಲಿ 50 ದಿನ ಕಾಲಾವಕಾಶ ಕೇಳಿದ್ದೆ. ಸಮಸ್ಯೆ ಎದುರಾಗಬಹುದೆಂದು ಮೊದಲೇ ನಾನು ತಿಳಿಸಿದ್ದೆ ಎಂದು ಪ್ರಧಾನಿ ಮೋದಿ ಹೇಳಿದರು.
ಕೇಂದ್ರ ಸರ್ಕಾರ ರೂ. 500 ಹಾಗು ರೂ.1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವುದರಿಂದ ದೇಶಕ್ಕಾಗುವ ಪ್ರಯೋಜನಗಳ ಕುರಿತು ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಿಳಿಸಿದರು.

ಮಮತಾ ಬ್ಯಾನರ್ಜಿಯವರ ನೇತೃತ್ವದ ತೃಣಮೂಲ ಕಾಂಗ್ರೆಸ್ ನಾಯಕರು ನಡೆಸಿದ ಶಾರದಾ ಚಿಟ್ ಫಂಡ್ ಹಗರಣವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಅವರು ಬಡವರು, ಕೂಲಿ ಕರ್ಮಿಕರು ಕಷ್ಟಪಟ್ಟು ದುಡಿದ ಹಣ ರಾಜಕಾರಣಿಗಳ ಕಿಸೆಗೆ ಸೇರುತ್ತಿದ್ದವು ಈಗ ಅದಕ್ಕೆ ಭಾರೀ ಪೆಟ್ಟು ಬಿದ್ದಿದೆ. ವ್ಯಂಗ್ಯವಾಡಿದರು. 70 ವರ್ಷಗಳಿಂದ ದೇಶವನ್ನು ಆಳಿದವರು ಈ ಅವ್ಯವಸ್ಥೆಯ ಬಗ್ಗೆ ತಿಳಿದಿದ್ದರೂ ಅಧಿಕಾರ ಕಳೆದುಕೊಳ್ಳುತ್ತೇವೆ ಎಂಬ ಭಯದಿಂದ ಈ ಕ್ರಮಕ್ಕೆ ಅವರು ಮುಂದಾಗಿರಲಿಲ್ಲ ನಾವು ಕ್ರಮ ಕೈಗೊಂಡಿದ್ದೇವೆ, ಎಂದು ಅವರು ಹೇಳಿದರು.  ನಾನು ಬಡವರು ಮತ್ತು ಮಧ್ಯಮ ವರ್ಗದವರ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇನೆ, 50 ದಿನ ನಿಮ್ಮ ಬೆಂಬಲ ನೀಡಿ ಸಾಕು ಎಂದು ಅವರು ಹೇಳಿದರು.

► Follow us on –  Facebook / Twitter  / Google+

Sri Raghav

Admin