ನೋಟ್ ಅಮಾನೀಕರಣದಿಂದ ಭಾರತದ ಆರ್ಥಿಕತೆಯಲ್ಲಿ ಪಾರದರ್ಶಕತೆ : ಜೇಟ್ಲಿ

Spread the love
ಬಜೆಟ್ ಮಂಡನೆ ಆರಂಭಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ
 

ನವದೆಹಲಿ, ಫೆ.1- ಭಾರತದ ಆರ್ಥಿಕತೆಯಲ್ಲಿನ ಪಾರದರ್ಶಕತೆಗೆ ನೋಟ್ ಅಮಾನೀಕರಣದಿಂದ ಸಾಧ್ಯವಾಗಿದೆ ಎಂದು ಹೇಳಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ. ಇದೊಂದು ಕೇಂದ್ರದ ಐತಿಹಾಸಿಕ ಹಾಗೂ ದಿಟ್ಟ ನಿರ್ಧಾರವಾಗಿತ್ತು ಎಂದು ತಿಳಿಸಿದ್ದಾರೆ. ಇಂದು ಬಜೆಟ್ ಮಂಡನೆ ವೇಳೆ ಈ ವಿಷಯ ಪ್ರಸ್ತಾಪಿಸಿದ ಅವರು, ನೋಟು ಅಮಾನೀಕರಣದಿಂದ ಆರ್ಥಿಕ ಕ್ಷೇತ್ರಕ್ಕೆ ಆಗಿರುವ ಲಾಭವನ್ನು ಬಡ ಜನರಿಗೆ ವರ್ಗಾವಣೆ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಮೂರು ಪ್ರಮುಖ ಸುಧಾರಣೆಗಳನ್ನು ತರಲಾಗಿದೆ.   ಜೊತೆಗೆ 10 ಪ್ರಮುಖ ಗುರಿಗಳನ್ನು ಹೊಂದಲಾಗಿದೆ ಎಂದು ಹೇಳಿದರು. ಪ್ರಾಮಾಣಿಕವಾಗಿ ತೆರಿಗೆ ಸುಧಾರಣೆಗೆ ಕ್ರಮ ವಹಿಸಲಾಗಿದ್ದು, ನೋಟು ಅಮಾನೀಕರಣ ಸರ್ಕಾರದ ಒಂದು ಸಾಧನೆ. ಇದರ ಲಾಭ ಈಗಾಗಲೇ ಗೋಚರಿಸುತ್ತಿದೆ.

ಕೇಂದ್ರ ಬಜೆಟ್ – 2017 (Live Updates) ]

ನೋಟು ಬ್ಯಾನ್‍ನಿಂದಾಗಿ ಬ್ಯಾಂಕ್‍ಗಳಲ್ಲಿ ಸಾಲದ ವಹಿವಾಟು ಕಡಿಮೆಯಾಗಿದೆ. ವಿದೇಶಿ ವಿನಿಮಯದಲ್ಲಿ ಭಾರೀ ಹೆಚ್ಚಳವಾಗಿರುವ ಬಗ್ಗೆ ಐಎಂಎಫ್ ಅಭಿಪ್ರಾಯಪಟ್ಟಿದೆ. ಒಟ್ಟಾರೆಯಾಗಿ ಜಿಡಿಪಿ ಹೆಚ್ಚಳವಾಗಿದ್ದು, ಹಣದುಬ್ಬರದಲ್ಲಿ ಇಳಿಕೆ ಕಂಡಿದೆ. ಇದರಿಂದ ಜನ ನಿಟ್ಟುಸಿರು ಬಿಡುವಂತಾಗಿದೆ ಎಂದರು.  ಇದೇ ವೇಳೆ ಜಿಎಸ್‍ಟಿಗೆ ಸಹಕರಿಸಿದ ಎಲ್ಲಾ ರಾಜ್ಯಗಳಿಗೂ ಅಭಿನಂದನೆ ಸಲ್ಲಿಸಿದ ಅವರು, ಜಿಎಸ್‍ಟಿ ಜಾರಿ ಬಳಿಕ ದೇಶದ ಸಮಗ್ರ ಅಭಿವೃದ್ದಿ ವೇಗ ಪಡೆಯಲಿದೆ. ಈ ನಿಟ್ಟಿನಲ್ಲಿ ದೇಶಕ್ಕೆ ಅಗತ್ಯವಿರುವ ಗ್ರಾಮೀಣಾಭಿವೃದ್ಧಿ, ಯುವಶಕ್ತಿ ಬಲವರ್ಧನೆ, ಬಡತನ ನಿರ್ಮೂಲನೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲೂ ಹೆಚ್ಚಿನ ಅನುಕೂಲ ಕಲ್ಪಿಸಲು ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಸುಧಾರಿತ ವ್ಯವಸ್ಥೆ ಅಳವಡಿಸಲು ಇನ್ನೋವೇಟಿವ್ ಫಂಡ್ ಜಾರಿಗೊಳಿಸಲಾಗಿದೆ. ಪರೀಕ್ಷೆಗಳಲ್ಲಿ ಸುಧಾರಣೆ ತರಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯನ್ನು ಜಾರಿಗೆ ತರಲಾಗುತ್ತಿದ್ದು, ಗ್ರಾಮೀಣ ಶಿಕ್ಷಣದಲ್ಲಿ ತಂತ್ರಜ್ಞಾನ ಅಳವಡಿಕೆಗೆ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin