ನ್ಯಾಯಾಂಗ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಬಳಕೆಗೆ ಪ್ರಧಾನಿ ಮೋದಿ ಕರೆ

Modi-Alahabad

ಅಲಹಾಬಾದ್, ಏ.2– ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತಂತ್ರಜ್ಞಾನವು ಪರಿಣಾಮಕಾರಿಯಾಗಿ ಬಳಕೆಯಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲಹಾಬಾದ್ ಹೈಕೋರ್ಟ್‍ನ 150ನೇ ವಾರ್ಷಿಕೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಶತಮಾನದಲ್ಲಿ ತಂತ್ರಜ್ಞಾನವು ಮಹತ್ವದ ಪಾತ್ರ ವಹಿಸುತ್ತಿದೆ. ಎಲ್ಲ ಕ್ಷೇತ್ರಗಳಂತೆ ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಇದು ಸಮರ್ಪಕ ರೀತಿಯಲ್ಲಿ ಉಪಯೋಗವಾಗಬೇಕೆಂದು ಕರೆ ನೀಡಿದರು.

ಕಾನೂನು ಕೇವಲ ಶ್ರೀಮಂತರು ಮತ್ತು ಪ್ರಭಾವಶಾಲಿಗಳಿಗೆ ಸೀಮಿತವಲ್ಲ. ದೇಶದ ಸಾಮಾನ್ಯ ಪ್ರಜೆಯೂ ಕಾನೂನು ಸೇವೆಗಳನ್ನು ಪರಿಣಾಮಕಾರಿಯಾಗಿ ಬಳಸುವ ಅವಕಾಶವಿದೆ. ಕಾನೂನು ದೃಷ್ಟಿಯಲ್ಲಿ ಎಲ್ಲರೂ ಒಂದೇ ಎಂದು ಮೋದಿ ವ್ಯಾಖ್ಯಾನಿಸಿದರು.   2014ರಿಂದ ಇಲ್ಲಿಯವರೆಗೆ ಸರ್ಕಾರದಿಂದ ಬಳಕೆಯಲ್ಲಿಲ್ಲದ ಮತ್ತು ನಿರುಪಯುಕ್ತವಾದ 1200 ಕಾನೂನುಗಳನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.   ದೇಶದ ಅತ್ಯಂತ ಹಳೆಯ ನ್ಯಾಯಾಲಯವಾದ ಅಲಹಾಬಾದ್ ಹೈಕೋರ್ಟ್ ಕಾನೂನು ಲೋಕದ ತೀರ್ಥ ಕ್ಷೇತ್ರ ಎಂದು ಪ್ರಧಾನಿ ಬಣ್ಣಿಸಿದರು.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಮೊದಲಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.   ನಂತರ ಪ್ರಧಾನಿ ಕಣಿವೆ ರಾಜ್ಯ ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆನಾನಿ-ನಾಶ್ರೀ ನಡುವೆ ದೇಶದ ಅತಿ ಉದ್ದದ (41 ಕಿ.ಮೀ) ಸುರಂಗ ಮಾರ್ಗವನ್ನು ಲೋಕಾರ್ಪಣೆ ಮಾಡಲು ತೆರಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin