ನ್ಯೂಜಿಲೆಂಡ್ ಸರಣಿಗೆ ಭಾರತ ತಂಡ ಪ್ರಕಟ

Spread the love

india-selection

ಮುಂಬೈ, ಸೆ.12- ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಮೂರು ಟೆಸ್ಟ್ ಮತ್ತು 5 ಏಕದಿನ ಪಂದ್ಯಗಳ ಸರಣಿಗಳಿಗಾಗಿ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಹಾಗೂ ಶೇಖರ್‌ಧವನ್ ಅವರನ್ನು ಉಳಿಸಿಕೊಳ್ಳಲಾಗಿದೆ. ಆದರೆ ಶಾರ್ದೂಲ್ ಠಾಕೂರ್ ಮತ್ತು ಸ್ಟುವರ್ಟ್ ಬಿನ್ನಿ ಅವರನ್ನು ಕೈ ಬಿಡಲಾಗಿದೆ. ಭಾರತ ತಂಡವು ಸೆಪ್ಟೆಂಬರ್ 22 ರಿಂದ ನ್ಯೂಜಿಲೆಂಡ್ ವಿರುದ್ಧ 3 ಟೆಸ್ಟ್ ಮತ್ತು 5 ಏಕದಿನ ಪಂದ್ಯಗಳನ್ನು ಆಡಲಿದೆ. ಸೆಪ್ಟೆಂಬರ್ 6 ರಿಂದ 18ರವರೆಗೆ ಮುಂಬೈ, ಕೋಲ್ಕತ್ತಾ ಹಾಗೂ ನವದೆಹಲಿಯಲ್ಲಿ ಅಭ್ಯಾಸ ಪಂದ್ಯಗಳು ನಡೆಯಲಿವೆ ಎಂದು ಆಯ್ಕೆ ಮಂಡಳಿಯ ಮುಖ್ಯಸ್ಥ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಸಭೆಯಲ್ಲಿ ತರಬೇತುದಾರ ಅನಿಲ್‌ಕುಂಬ್ಳೆ , ನಾಯಕ ವಿರಾಟ್ ಕೊಹ್ಲಿ ಮತ್ತಿತರರು ಪಾಲ್ಗೊಂಡಿದ್ದರು.
ಭಾರತ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್.ರಾಹುಲ್, ಚೇತೇಶ್ವರ್‌ಪೂಜಾರ, ಅಜೆಂಕ್ಯಾ ರಹಾನೆ, ಮುರಳಿ ವಿಜಯ್, ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್, ವೃದ್ಧಿಮಾನ್ ಸಾಹ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಭುವನೇಶ್ವರ್‌ಕುಮಾರ್, ಶಿಖರ್ ಧವನ್, ಅಮಿತ್ ಮಿಶ್ರಾ ಮತ್ತು ಉಮೇಶ್‌ಯಾದವ್.

► Follow us on –  Facebook / Twitter  / Google+

Sri Raghav

Admin