ಪಕ್ಷದ ಸಂಘಟನೆಗೆ ಆದ್ಯತೆ ನೀಡಿ : ವೆಂಕಟಸ್ವಾಮಿ

venkataswamy

ವಿಜಯಪುರ, ಆ.19- ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವು ಅತಿ ಹೆಚ್ಚು ಬಲಾಢ್ಯವಾಗುತ್ತಿದ್ದು, ಕಳೆದ ತಾ. ಪಂ., ಜಿ.ಪಂ.ಗಳಲ್ಲಿ ಅತ್ಯುತ್ತಮ ಸಾಧನೆ ತೋರಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು, ಕಾರ್ಯಕರ್ತರು ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮಾಜಿ ಶಾಸಕ ವೆಂಕಟಸ್ವಾಮಿ ತಿಳಿಸಿದರು.ಇಲ್ಲಿಗೆ ಸಮೀಪದ ಸಾದಹಳ್ಳಿ ಗೇಟ್ ಬಳಿಯ ಜೇಡ್ ಗಾರ್ಡನ್‍ನಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಅವಧಿಯಲ್ಲಿ ದೇವನಹಳ್ಳಿ ಕ್ಷೇತ್ರಕ್ಕೆ 450 ಕೋಟಿಗೂ ಹೆಚ್ಚು ಅಭಿವೃದ್ದಿ ಕಾರ್ಯಗಳನ್ನು ಮಾಡಿಸುವುದರೊಂದಿಗೆ ಹಲವಾರು ಉದ್ದಿಮೆಗಳು ಬರಲು ಶ್ರಮಿಸಿದ್ದಾಗಿ ತಿಳಿಸಿದರು.
ಟೌನ್ ಕಾಂಗ್ರೆಸ್ ಅಧ್ಯಕ್ಷ ಎಂ.ಸತೀಶ್ ಕುಮಾರ್ ಮಾತನಾಡಿ, ವೆಂಕಟಸ್ವಾಮಿರವರ ನೇತೃತ್ವದಲ್ಲಿ ವಿಜಯಪುರ ಪಟ್ಟಣದಲ್ಲಿ 23 ವಾರ್ಡ್‍ಗಳ ಪೈಕಿ, 16 ವಾರ್ಡ್‍ಗಳನ್ನು ಕಾಂಗ್ರೆಸ್ ಪಕ್ಷ ತನ್ನದಾಗಿಸಿಕೊಂಡಿತ್ತು ಎಂದು ತಿಳಿಸಿದರು. ಬೆಂ.ಗ್ರಾ.ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಅನಂತಕುಮಾರಿ ಚಿನ್ನಪ್ಪ, ಗೊಡ್ಲುಮುದ್ದೇನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಚೇತನ್ ಗೌಡ, ಟೌನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿಚಿನ್ನಪ್ಪ,ಗ್ರಾ.ಪಂ., ತಾ.  ಪಂ., ತಾ.  ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

 

► Follow us on –  Facebook / Twitter  / Google+

Sri Raghav

Admin