‘ಪದ್ಮಾವತಿ’ಗೆ ಪವರ್ ಮಿನಿಸ್ಟರ್ ರಕ್ಷಣೆ

Padmavati--01

ಬೆಳಗಾವಿ(ಸುವರ್ಣಸೌಧ), ನ.20-ಪದ್ಮಾವತಿ ಚಿತ್ರದ ನಟಿ ದೀಪಿಕಾ ಪಡುಕೋಣೆಯ ತಲೆ ಕತ್ತರಿಸಿದವರಿಗೆ 10 ಕೋಟಿ ರೂ.ಗಳ ಬಹುಮಾನ ನೀಡುವುದಾಗಿ ಹೇಳಿರುವ ಬಿಜೆಪಿ ನಾಯಕರ ಬಗ್ಗೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದವರಾದ ದೀಪಿಕಾ ಅವರ ಬಗ್ಗೆ ಹರಿಯಾಣದ ಬಿಜೆಪಿ ಮುಖಂಡರ ನೀಡಿರುವ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಶಿವಕುಮಾರ್, ನಟಿಗೆ ರಾಜ್ಯದಿಂದ ಸೂಕ್ತ ಭದ್ರತೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.  ದೀಪಿಕಾ ಪಡುಕೋಣೆ ನಮ್ಮ ರಾಜ್ಯದ ಮಗಳು. ಅವರಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆ ನೀಡುವುದು ರಾಜ್ಯದ ಕರ್ತವ್ಯವಾಗಿದೆ. ಹೀಗಾಗಿ ನಾನು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ.

Sri Raghav

Admin