ಪರಪ್ಪನ ಅಗ್ರಹಾರ ಕರ್ಮಕಾಂಡದ ಮದ್ಯಂತರ ವರದಿ ಸಲ್ಲಿಕೆ

Spread the love

Parappana-Agraha-r-021

ಬೆಂಗಳೂರು, ಜು.24- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ವಿನಯ್‍ಕುಮಾರ್ ಅವರು, ಇಂದು ಸಂಜೆ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸುವ ಸಾಧ್ಯತೆ ಇದೆ. ಕೇಂದ್ರ ಕಾರಾಗೃಹದಲ್ಲಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ, ಛಾಪಾಕಾಗದ ಹಗರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಖರಿಂಲಾಲ್ ತೆಲಗಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ.

ಶಶಿಕಲಾ ಅವರಿಂದ ಎರಡು ಕೋಟಿ ರೂ.ಗಳ ಲಂಚ ಪಡೆಯಲಾಗಿದೆ ಅಲ್ಲದೆ, ಜೈಲಿನಲ್ಲಿ ಗಾಂಜಾ, ಮೊಬೈಲ್, ಡ್ರಗ್ಸ್ ಬಳಕೆಯಾಗುತ್ತಿದೆ ಎಂಬ ಹಲವು ಆರೋಪಗಳ ವರದಿಯನ್ನು ಡಿಐಜಿ ರೂಪಾ ನೀಡಿದ್ದರು. ಡಿಜಿಪಿ ಸತ್ಯನಾರಾಯಣರಾವ್ ಅವರ ಮೇಲೆ ಗುರುತರ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ವಿನಯ್‍ಕುಮಾರ್ ಅವರಿಗೆ ತನಿಖೆ ನಡೆಸಲು ಆದೇಶಿಸಿತ್ತಲ್ಲದೆ, ಒಂದು ವಾರದೊಳಗೆ ಮಧ್ಯಂತರ ವರದಿ ನೀಡಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ವಿನಯ್‍ಕುಮಾರ್ ಅವರು ಆರೋಪಕ್ಕೆ ಸಂಬಂಧಿಸಿದ ಮಧ್ಯಂತರ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಗಳಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin